ವಿಜಯಸಾಕ್ಷಿ ಸುದ್ದಿ, ಗದಗ : ಕಳೆದ 2 ವರ್ಷಗಳಿದ ಮನೆ ಮಾತಾಗಿರುವ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ವರ್ಗಾವಣೆಯಾಗಿದ್ದು, ಅವರ ವರ್ಗಾವಣೆಯ ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ ಮನವಿ ಮಾಡಿದ್ದಾರೆ.
ಎರಡು ವರ್ಷಗಳಿಂದ ಉತ್ತಮ ಆಡಳಿತ ನೀಡಿ ಪ್ರಾಮಾಣಿಕವಾಗಿ ಕಾರ್ಯನಿವಹಿಸಿ, ರೈತರ ಅನೇಕ ಸಮಸ್ಯೆಗಳಿಗೆ ಸ್ಪಂದಿಸಿ, ಅನೇಕ ಯೋಜನೆಗಳನ್ನು ರೈತರಿಗೆ ತಲುಪಿಸುವಲ್ಲಿ ಸಹಕಾರಿಯಾಗಿದ್ದಾರೆ. ಜಿಲ್ಲೆಯ ರೈತರಿಗೆ ಬರ ಪರಿಹಾರ ಹಾಗೂ ಬೆಳೆ ವಿಮಾ ಹಣವನ್ನು ರಾಜ್ಯದಲ್ಲೇ ಅತಿ ಹೆಚ್ಚು ಪ್ರಮಾಣದಲ್ಲಿ ಬಿಡುಗಡೆ ಮಾಡುವ ಮೂಲಕ ರೈತರ ಖಾತೆಗೆ ನೇರವಾಗಿ ಜಮಾ ಮಾಡಿದ್ದಾರೆ.
ರೈತರ ಸಮಸ್ಯೆಗಳನ್ನು ಸ್ಥಳದಲ್ಲಿ ಗಮನಿಸಿ ಪರಿಹಾರ ನೀಡುವ ಮೂಲಕ ರೈತರ ಸಮಸ್ಯೆಗಳನ್ನು ಈಡೇರಿಸಿಕೊಡುತ್ತಾರೆ. ಅದಕ್ಕಾಗಿ ಇಂಥ ಜಿಲ್ಲಾಧಿಕಾರಿಗಳನ್ನು ಗದಗ ಜಿಲ್ಲಾ ರೈತರು ಕಳಿಸಿಕೊಡುವುದಕ್ಕೆ ಸಿದ್ಧರಿಲ್ಲ ಎಂದಿರುವ ಅವರು, ಈ ವರ್ಗಾವಣೆಯನ್ನು ರದ್ದು ಮಾಡಿ ಮತ್ತೆ ನಿಯೋಜಿಸಬೇಕು ಎಂದು ಮನವಿ ಮಾಡಿದ್ದಾರೆ.