HomeWorld Newsವೆನೆಜುವೆಲಾದ ವಿಪಕ್ಷ ನಾಯಕಿಗೆ ಒಲಿದ ನೊಬೆಲ್ ಶಾಂತಿ ಪ್ರಶಸ್ತಿ: ಟ್ರಂಪ್‌ʼಗೆ ನಿರಾಸೆ

ವೆನೆಜುವೆಲಾದ ವಿಪಕ್ಷ ನಾಯಕಿಗೆ ಒಲಿದ ನೊಬೆಲ್ ಶಾಂತಿ ಪ್ರಶಸ್ತಿ: ಟ್ರಂಪ್‌ʼಗೆ ನಿರಾಸೆ

For Dai;y Updates Join Our whatsapp Group

Spread the love

ವಾಷಿಂಗ್ಟನ್: 2025 ರ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಇಂದು ಮಾರಿಯಾ ಕೊರಿನಾ ಮಚಾದೊ ಅವರಿಗೆ ನೀಡಲಾಗಿದೆ.  ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆಯಾಗಿದೆ.

ಹೌದು ತಮಗೇ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಬೇಕೆಂದು ಅವಕಾಶ ಸಿಕ್ಕಾಗಲೆಲ್ಲ ಘೋಷಿಸಿಕೊಳ್ಳುತ್ತಿದ್ದ ಟ್ರಂಪ್ ಅವರಿಗೆ ಭಾರೀ ನಿರಾಸೆಯಾಗಿದೆ. ವೆನೆಜುವೆಲಾದ ಜನರ ಪರವಾದ ಹೋರಾಟಕ್ಕಾಗಿ ಮರಿಯಾ ಕೊರಿನಾ ಮಚಾಡೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ಕೈತಪ್ಪಿದೆ. ನಾರ್ವೇಜಿಯನ್ ನೊಬೆಲ್ ಸಮಿತಿಯು ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿದೆ.

ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಕೊಡಿಸುವ ಸಲುವಾಗಿ ಅವರ ದಣಿವರಿಯದ ಕೆಲಸ ಮತ್ತು ಪ್ರಜಾಪ್ರಭುತ್ವಕ್ಕೆ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಅವರ ಹೋರಾಟಕ್ಕಾಗಿ ಮಚಾಡೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ಮಚಾಡೊ ಅವರು 20 ವರ್ಷಗಳ ಹಿಂದೆ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗಾಗಿ ಧ್ವನಿಯೆತ್ತಿದರು. ಅಂದಿನಿಂದ ಅವರು ಜನರ ಪರವಾಗಿ ನಿಂತಿದ್ದಾರೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!