HomeKarnataka Newsಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ: ಬಿ.ವೈ.ವಿಜಯೇಂದ್ರ

ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ: ಬಿ.ವೈ.ವಿಜಯೇಂದ್ರ

For Dai;y Updates Join Our whatsapp Group

Spread the love

ದಾವಣಗೆರೆ: ರೈತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಇವತ್ತು ಹೋರಾಟಕ್ಕೆ ಚಾಲನೆ ನೀಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ ಎಂದು ಅವರು ಆಕ್ಷೇಪಿಸಿದ್ದಾರೆ.

ಇಂದು ಇಲ್ಲಿ ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ನಡಹಳ್ಳಿ, ರಾಜ್ಯದ ಹಿರಿಯ ನಾಯಕ ಸಿ.ಟಿ.ರವಿ, ಮುಖಂಡರಾದ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ ಸೇರಿ ಜಿಲ್ಲೆಯ ನಾಯಕರು ಒಟ್ಟಾಗಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ರಾಜ್ಯದಲ್ಲಿರುವ ಅನಿಷ್ಟ ರೈತವಿರೋಧಿ ಕಾಂಗ್ರೆಸ್ ಸರಕಾರವು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ; ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥವಾಗಿಲ್ಲ ಎಂದು ಟೀಕಿಸಿದರು.

ಮೆಕ್ಕೆ ಜೋಳದ ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಲಕ್ಷ್ಮೇಶ್ವರದಲ್ಲಿ ಹೋರಾಟ ನಡೆಯುತ್ತಿದೆ. ನವಲಗುಂದದಲ್ಲಿ ರೈತ ಮುಖಂಡ ಶಂಕ್ರಣ್ಣ ಅಂಬಳಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಬಾಗಲಕೋಟೆ, ಶಿವಮೊಗ್ಗ ಸೇರಿ ಅನೇಕ ಜಿಲ್ಲೆಗಳಲ್ಲಿ ಹೋರಾಟ ನಡೆಯುತ್ತಿದೆ. ಕೇಂದ್ರವು ಬೆಂಬಲ ಬೆಲೆ ಘೋಷಿಸಿದ್ದರೂ ರಾಜ್ಯ ಸರಕಾರವು ಖರೀದಿ ಕೇಂದ್ರ ತೆರೆದಿಲ್ಲ ಎಂದು ಆಕ್ಷೇಪಿಸಿದರು.

ಮುಖ್ಯಮಂತ್ರಿಗಳು ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು. ತುಂಗಭದ್ರಾ ಅಣೆಕಟ್ಟಿಗೆ 32 ಕ್ರಸ್ಟ್ ಗೇಟ್ ಅಳವಡಿಸದೇ ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಸುತ್ತಲಿನ ರೈತರು ಎರಡನೇ ಬೆಳೆ ಬೆಳೆಯಲು ಆಗುತ್ತಿಲ್ಲ; ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಅನ್ಯಾಯ ಮಾಡಿದೆ. ಅವರಿಗೆ ಎಕರೆಗೆ 25 ಸಾವಿರ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು.

ರಾಜ್ಯದ ರೈತರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದೇ ಇಡೀ ಸಚಿವಸಂಪುಟವು ದೆಹಲಿಯಲ್ಲಿ ಕುಳಿತಿದೆ. ಮುಖ್ಯಮಂತ್ರಿಗಳು ಮೆಕ್ಕೆಜೋಳ ಖರೀದಿ ಕೇಂದ್ರದ ಕುರಿತು ಚರ್ಚಿಸಲು ಸಭೆ ಕರೆದರೆ ಕೃಷಿ ಸಚಿವರು ದೆಹಲಿಯಲ್ಲಿದ್ದರು ಎಂದು ಟೀಕಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!