• About
  • Advertise
  • Privacy & Policy
  • Contact
Friday, November 20, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ದ್ವೇಷದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ: ಜಿಲ್ಲಾ ಸತ್ರ ನ್ಯಾಯಾಧೀಶೆ ನಾಗವೇಣಿ

Vijaya Sakshi News Desk by Vijaya Sakshi News Desk
December 1, 2025
in Gadag News
ದ್ವೇಷದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ: ಜಿಲ್ಲಾ ಸತ್ರ ನ್ಯಾಯಾಧೀಶೆ ನಾಗವೇಣಿ
0
SHARES
5
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಡಿಸೆಂಬರ್ 13ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಬೇಕೆಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ನಾಗವೇಣಿ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಗಾರರು ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಬಹುದು. ರಾಜೀ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು. ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಕಿತ್ತಾಟ, ದ್ವೇಷ, ಅಸೂಯೆಯಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಪರಸ್ಪರ ರಾಜೀ ಸಂಧಾನ, ಹೊಂದಾಣಿಕೆ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 14 ಬೆಂಚ್‌ಗಳನ್ನು ರಚಿಸಿದೆ. ಗದಗ ಜಿಲ್ಲೆಯಲ್ಲಿ ಒಟ್ಟು 20,172 ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 3,261 ಪ್ರಕರಣಗಳನ್ನು ಗುರುತಿಸಿದ್ದು ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೇಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದರು.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನವೊಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳವರು ಡಿಸೆಂಬರ್ 13, 2025 ರಂದು ಜರುಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ಗಂಡ–ಹೆಂಡತಿಯನ್ನು ನಾವು ಬೇರ್ಪಡಿಸುವುದಿಲ್ಲ. ಅವರನ್ನು ಒಂದುಗೂಡಿಸಲು ಕಾನೂನು ಸೇವಾ ಪ್ರಾಧಿಕಾರ ಪ್ರಯತ್ನಿಸುತ್ತದೆ. ಪ್ರಕರಣ ದಾಖಲಿಸಿದ ದಂಪತಿಗಳು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಭಾಗವಹಿಸಿ ಸಹಕಾರ ನೀಡಬೇಕು ಎಂದರು.

ಬಾಕ್ಸ್
ಕಳೆದ ಸೆಪ್ಟೆಂಬರ್ 2025ರಲ್ಲಿ ಜರುಗಿದ ಲೋಕ ಅದಾಲತ್‌ನಲ್ಲಿ 3740 ಚಾಲ್ತಿ ಪ್ರಕರಣಗಳು ಹಾಗೂ 28486 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿ ಒಟ್ಟು 32226 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ 4 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ. ಆರ್.ಟಿ.ಓ ಕಛೇರಿಗಳಲ್ಲಿ ಇರುವ ವಾಹನಗಳ ದಂಡದ ಬಾಕಿ ಹಣವನ್ನು ಪಾವತಿಸಲು ಶೇ. 50 ರಿಯಾಯತಿ ನೀಡಲಾಗಿದೆ. ಡಿಸೆಂಬರ್ 12ರವರೆಗೆ ಈ ಅವಕಾಶವಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಸಿ.ಎಸ್. ಶಿವನಗೌಡ್ರ ತಿಳಿಸಿದರು.

Tags: BreakingNewsgadagnewsKarnatakaVijayasakshivijayasakshinews
ShareSendShare
Previous Post

ಗದಗ| ಲಕ್ಷ್ಮೇಶ್ವರ ರೈತರ ಹೋರಾಟಕ್ಕೆ ಮಣಿದ ಸರ್ಕಾರ: ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ!

Next Post

ಮೆಕ್ಕೆಜೋಳ ಹೊಲದಲ್ಲಿ ಭಾರೀ ಗಾತ್ರದ ಹೆಬ್ಬಾವು ಪ್ರತ್ಯಕ್ಷ: ಅರಣ್ಯ ಸಿಬ್ಬಂದಿಯಿಂದ ರಕ್ಷಣೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮೆಕ್ಕೆಜೋಳ ಹೊಲದಲ್ಲಿ ಭಾರೀ ಗಾತ್ರದ ಹೆಬ್ಬಾವು ಪ್ರತ್ಯಕ್ಷ: ಅರಣ್ಯ ಸಿಬ್ಬಂದಿಯಿಂದ ರಕ್ಷಣೆ

ಮೆಕ್ಕೆಜೋಳ ಹೊಲದಲ್ಲಿ ಭಾರೀ ಗಾತ್ರದ ಹೆಬ್ಬಾವು ಪ್ರತ್ಯಕ್ಷ: ಅರಣ್ಯ ಸಿಬ್ಬಂದಿಯಿಂದ ರಕ್ಷಣೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕೇರಳದ ಬೃಹತ್ ಜಟಾಯು ಶಿಲ್ಪ ವೀಕ್ಷಿಸಲಿದ್ದಾರಾ ಪ್ರಧಾನಿ ಮೋದಿ? ಸುರೇಶ್ ಗೋಪಿ ನೀಡಿದ ಮಹತ್ವದ ಸುಳಿವು

ಕೇರಳದ ಬೃಹತ್ ಜಟಾಯು ಶಿಲ್ಪ ವೀಕ್ಷಿಸಲಿದ್ದಾರಾ ಪ್ರಧಾನಿ ಮೋದಿ? ಸುರೇಶ್ ಗೋಪಿ ನೀಡಿದ ಮಹತ್ವದ ಸುಳಿವು

November 20, 2026
‘ಬಸವ ಮಂಟಪ’ ಕೃತಿ ವಿವಾದ: ಕರ್ನಾಟಕಕ್ಕೆ ದೊಡ್ಡ ಅಗೌರವ, ಪುಸ್ತಕ ಮುಟ್ಟುಗೋಲಿಗೆ ನಿರ್ಧಾರ – ಡಿ.ಕೆ. ಶಿವಕುಮಾರ್

‘ಬಸವ ಮಂಟಪ’ ಕೃತಿ ವಿವಾದ: ಕರ್ನಾಟಕಕ್ಕೆ ದೊಡ್ಡ ಅಗೌರವ, ಪುಸ್ತಕ ಮುಟ್ಟುಗೋಲಿಗೆ ನಿರ್ಧಾರ – ಡಿ.ಕೆ. ಶಿವಕುಮಾರ್

November 20, 2026
ಶಕ್ತಿ ಯೋಜನೆಯ ಬಳಿಕ ಬಸ್ʼಗಳಲ್ಲಿ ಹೆಚ್ಚಿದ ನೂಕುನುಗ್ಗಲು; ಪ್ರಯಾಣಿಕರ ಸುರಕ್ಷತೆಗೆ ಸಾರಿಗೆ ಇಲಾಖೆ ಮಾಸ್ಟರ್ ಪ್ಲ್ಯಾನ್

ಶಕ್ತಿ ಯೋಜನೆಯ ಬಳಿಕ ಬಸ್ʼಗಳಲ್ಲಿ ಹೆಚ್ಚಿದ ನೂಕುನುಗ್ಗಲು; ಪ್ರಯಾಣಿಕರ ಸುರಕ್ಷತೆಗೆ ಸಾರಿಗೆ ಇಲಾಖೆ ಮಾಸ್ಟರ್ ಪ್ಲ್ಯಾನ್

November 20, 2026
ಕೊಡಿಗೆಹಳ್ಳಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಅಸ್ಥಿಪಂಜರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎರಡನೇ ಪತಿಯೇ ಕೊಲೆಗಾರ!

ಕೊಡಿಗೆಹಳ್ಳಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಅಸ್ಥಿಪಂಜರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎರಡನೇ ಪತಿಯೇ ಕೊಲೆಗಾರ!

November 20, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕೇರಳದ ಬೃಹತ್ ಜಟಾಯು ಶಿಲ್ಪ ವೀಕ್ಷಿಸಲಿದ್ದಾರಾ ಪ್ರಧಾನಿ ಮೋದಿ? ಸುರೇಶ್ ಗೋಪಿ ನೀಡಿದ ಮಹತ್ವದ ಸುಳಿವು

ಕೇರಳದ ಬೃಹತ್ ಜಟಾಯು ಶಿಲ್ಪ ವೀಕ್ಷಿಸಲಿದ್ದಾರಾ ಪ್ರಧಾನಿ ಮೋದಿ? ಸುರೇಶ್ ಗೋಪಿ ನೀಡಿದ ಮಹತ್ವದ ಸುಳಿವು

November 20, 2026
‘ಬಸವ ಮಂಟಪ’ ಕೃತಿ ವಿವಾದ: ಕರ್ನಾಟಕಕ್ಕೆ ದೊಡ್ಡ ಅಗೌರವ, ಪುಸ್ತಕ ಮುಟ್ಟುಗೋಲಿಗೆ ನಿರ್ಧಾರ – ಡಿ.ಕೆ. ಶಿವಕುಮಾರ್

‘ಬಸವ ಮಂಟಪ’ ಕೃತಿ ವಿವಾದ: ಕರ್ನಾಟಕಕ್ಕೆ ದೊಡ್ಡ ಅಗೌರವ, ಪುಸ್ತಕ ಮುಟ್ಟುಗೋಲಿಗೆ ನಿರ್ಧಾರ – ಡಿ.ಕೆ. ಶಿವಕುಮಾರ್

November 20, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper