ಮತದಾನಕ್ಕಿಂತ ಮಹತ್ವವಾದದ್ದು ಇನ್ನೊಂದಿಲ್ಲ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹೊಸ ಮತದಾರರನ್ನು ಸೆಳೆಯುವುದು, ಉತ್ತೇಜಿಸುವುದು ಹಾಗೂ ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಭಾರತದಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ ಎಂದು ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎ.ಕೆ. ಮಠ ತಿಳಿಸಿದರು.

Advertisement

ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಅರಿವು ಮೂಡಿಸುವ ಪ್ರಯತ್ನದ ಭಾಗವಾಗಿ ಪ್ರತಿ ವರ್ಷ ಭಾರತದಲ್ಲಿ ಜನವರಿ 25ರಂದು ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. 1950ರಲ್ಲಿ ಸ್ಥಾಪನೆಯಾದ ಭಾರತದ ಚುನಾವಣಾ ಆಯೋಗದ ಸಂಸ್ಥಾಪನ ದಿನದ ನೆನಪಿಗಾಗಿ ಇದೇ ದಿನದಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಭಾರತದ ಚುನಾವಣಾ ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ದೇಶದಲ್ಲಿ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. ಇಂತಹ ಸಂಸ್ಥೆಗೆ ಬೆಂಬಲವಾಗಿ ನಿಲ್ಲುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಪ್ರತಿಯೊಬ್ಬರೂ ಕಡ್ಡಾಯವಾಗಿ ತಮ್ಮ ರಾಜಕೀಯ ಹಕ್ಕನ್ನು ಚಲಾಯಿಸಬೇಕೆಂದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 


Spread the love

LEAVE A REPLY

Please enter your comment!
Please enter your name here