ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಚಂದ್ರಶೇಖರ ನಾಥ ಶ್ರೀ ಗೆ ನೋಟಿಸ್!

0
Spread the love

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’ ಎಂಬ ಹೇಳಿಕೆ ನೀಡಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ.

Advertisement

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್​​ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚಂದ್ರಶೇಖರನಾಥ ಸ್ವಾಮೀಜಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ವಕ್ಫ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಮತದಾನದ ಹಕ್ಕಿಗೆ ಕೈ ಹಾಕಿದ್ದಾರೆ. ಮುಸ್ಲಿಮರಿಗೆ ಮತದಾನದ ಪವರ್ ಇಲ್ಲದಂತೆ ಮಾಡಿಬಿಡಬೇಕು ಅಂತಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ವಿವಾದ ದೊಡ್ಡದಾಗುತ್ತಿದ್ದಂತೆ ಚಂದ್ರಶೇಖರನಾಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದರು. ಅದು ಬಾಯಿ ತಪ್ಪಿ ಆಡಿದ ಮಾತು. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದರು.

 


Spread the love

LEAVE A REPLY

Please enter your comment!
Please enter your name here