Crime News: ಮನೆಗಳ್ಳತವನ್ನೇ ವೃತ್ತಿ ಮಾಡಿಕೊಂಡಿದ್ದ ಕುಖ್ಯಾತ ಕಳ್ಳನ ಬಂಧನ!

0
Spread the love

ಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಪೊಲೀಸರ ಕಾರ್ಯಾಚರಣೆ ನಡೆಸಿ ಮನೆಗಳ್ಳತವನ್ನೇ ವೃತ್ತಿ ಮಾಡಿಕೊಂಡಿದ್ದ ಕುಖ್ಯಾತ ಕಳ್ಳನನ್ನು ಅರೆಸ್ಟ್‌ ಮಾಡಿದ್ದಾರೆ. ಉತ್ತರ ಪ್ರದೇಶದ ಮೋರದಾಬಾದ್ ಜಿಲ್ಲೆಯ ಕಳ್ಳ ಫಹೀಮ್ @ ಎಟಿಎಂ ಫಹೀಮ್ ಬಂಧಿತ ಆರೋಪಿಯಾಗಿದ್ದು,

Advertisement

ಕಾರಿನಲ್ಲಿ ಫುಲ್ ಸ್ಟಾಂಡರ್ಡ್ ಆಗಿ ಬಂದು  ಬೆಳಗ್ಗೆ ಪೋಷಕರು ಮಕ್ಕಳನ್ನು ಶಾಲೆಗೆ ಬಿಡಲು ಹೋದಾಗ ಹೊಂಚು ಹಾಕಿ ಕಾಯುತ್ತಿದ್ದ ಆರೋಪಿ ಮನೆಯವರು ಹೊರಹೋದ ತಕ್ಷಣ ಅರ್ಧ ಗಂಟೆಯಲ್ಲೇ ಕಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದನು.

ಕಳೆದ ವರ್ಷ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದನು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ವರ್ಷ ಏಪ್ರಿಲ್ ನಲ್ಲಿ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಕಳ್ಳತನ ಮಾಡಿ ಮಹಾರಾಷ್ಟ್ರ, ಉತ್ತರ ಪ್ರದೇಶ, ಹರಿಯಾಣ, ದೆಹಲಿಯಲ್ಲಿ ಕದ್ದ ಚಿನ್ನ ಮಾರಾಟ ಮಾರಿದ್ದನು.

ಇದೀಗ ಪೊಲೀಸರು ಕಾರ್ಯಾಚರಣೆ ನಡೆಸಿ ಉತ್ತರ ಪ್ರದೇಶದಲ್ಲಿ ಆರೋಪಿ ಬಂಧಿಸಿದ್ದಾರೆ. ಬಂಧಿತನಿಂದ 1.25 ಕೋಟಿ ಮೌಲ್ಯದ 1ಕೆಜಿ 700 ಗ್ರಾಂ ಚಿನ್ನ ವಶಕ್ಕೆ ಪಡೆದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here