ಗದಗ: ವೇತನ ವಿಳಂಬ ಹಿನ್ನೆಲೆಯಲ್ಲಿ ಮಳೆಯನ್ನು ಲೆಕ್ಕಿಸದೇ ನರೇಗಾ ನೌಕರರು ಗದಗ ಜಿಲ್ಲಾ ಆಡಳಿತದ ಭವನ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ.
ಕಳೆದ 5 ತಿಂಗಳಿಂದ ವೇತನ ಪಾವತಿ ಆಗಿಲ್ಲ. ಇದರಿಂದಾಗಿ ಪ್ರತಿಭಟನೆ ಮಾಡುತ್ತಿದ್ದು, ಶಾಲೆ ಆರಂಭ ಆಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಪೀಸ್ ತುಂಬಲು ಪರದಾಡುವಂತಾಗಿದ್ದು, ಕೂಡಲೇ ವೇತನ ಪಾವತಿ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿವಿಧ ನ್ಯಾಯಯುತ ಬೇಡಿಕೆ ಈಡೇರಿಸಲು ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.



