HomeGadag Newsನರೇಗಾ ಕಾಮಗಾರಿ ಕೂಲಿ ಕಾರ್ಮಿಕರಿಗೆ ವರದಾನ

ನರೇಗಾ ಕಾಮಗಾರಿ ಕೂಲಿ ಕಾರ್ಮಿಕರಿಗೆ ವರದಾನ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ರೋಣ: ತಾಲೂಕಿನಲ್ಲಿ ಎಪ್ರಿಲ್ ಮೊದಲ ವಾರರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗಿದ್ದು, ನರೇಗಾ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಗ್ರಾಮೀಣ ಪ್ರದೇಶಗಳ ಜನರಿಗೆ ಯೋಜನೆಯ ಸದುಪಯೋಗ ಮಾಡಿಕೊಡುವ ಕೆಲಸ ನಿಮ್ಮಿಂದ ಆಗಬೇಕು ಎಂದು ಕಾಯಕ ಬಂಧುಗಳ ಸಭೆಯಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ.ಕಂದಕೂರ ಹೇಳಿದರು.

ಪಟ್ಟಣದ ಕನ್ನಡ ಸಾಹಿತ್ಯ ಸಭಾ ಭವನದಲ್ಲಿ ಮಂಗಳವಾರ ನಡೆದ ಪಿಡಿಓ, ಕಾಯಕಬಂಧುಗಳ ಹಾಗೂ ನರೇಗಾ ಸಿಬ್ಬಂದಿಗೆ ಆಯೋಜಿಸಿದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬರಗಾಲದಲ್ಲಿ ಕೆಲಸ ಸಿಗುವುದಿಲ್ಲ ಎಂದು ಆತಂಕದಲ್ಲಿರುವ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ನೆರವಾಗಲು ಎಪ್ರಿಲ್ ಮೊದಲ ವಾರದಲ್ಲೇ ನರೇಗಾ ಯೋಜನೆಯಡಿಯಲ್ಲಿ ಸಮುದಾಯ ಕಾಮಗಾರಿಗಳನ್ನು ಆರಂಭಿಸಲಾಗುತ್ತಿದೆ. ವಾರ್ಷಿಕವಾಗಿ 100 ದಿನಗಳವರೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕೆಲಸ ಸಿಗುವಂತಾಗಬೇಕು. ಈ ಮೂಲಕ ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆಗಳನ್ನು ನಿವಾರಿಸಲು ನರೇಗಾ ವರದಾನವಾಗಲಿದೆ ಎಂದರು.

ಬೇಸಿಗೆ ಅವಧಿಯ 60 ದಿನಗಳ ಕಾಲ ನರೇಗಾ ಯೋಜನೆಯಡಿ ಕೆಲಸ ಮಾಡಿದರೆ ಕೂಲಿಕಾರರಿಗೆ 22,200 ರೂಪಾಯಿ ಸಿಗುತ್ತದೆ. ಕೂಲಿಕಾರರು ನರೇಗಾ ಯೋಜನೆಯಿಂದಾಗಿ ಬರುವ ಈ ಹಣವನ್ನು ಮುಂಗಾರಿನ ಕೃಷಿ ಬಿತ್ತನೆಯ ಕಾರ್ಯಕ್ಕೆ ಸದುಪಯೋಗಪಡಿಸಿಕೊಳ್ಳಲು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಾಗಾರದಲ್ಲಿ ರೋಣ ತಾಲೂಕಿನ 22 ಗ್ರಾಮ ಪಂಚಾಯಿತಿಗಳ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಇಂಜಿನಿಯರ್‌ಗಳು, ಬಿಎಫ್‌ಟಿ, ಜಿಕೆಎಂ, ಡಿಇಓ, ಸೇರಿದಂತೆ ನರೇಗಾ ಸಿಬ್ಬಂದಿ ವರ್ಗದವರು ಹಾಜರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!