ಕೊಪ್ಪಳ: ಕಾರಟಗಿ ತಾಲೂಕಿನ ಬರಗೂರು ಕ್ರಾಸ್ನಲ್ಲಿ ಟಾಟಾ ಏಸ್ ಪಲ್ಟಿಯಾಗಿ 29 ನರೇಗಾ ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಹುಬ್ಬಳ್ಳಿ ಮತ್ತು ಕೊಪ್ಪಳದ ಕಿಮ್ಸ್ ಆಸ್ಪತ್ರೆಯಲ್ಲಿ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನುಳಿದ ಗಾಯಾಳುಗಳನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಸಚಿವ ಶಿವರಾಜ ತಂಗಡಗಿ ಆಸ್ಪತ್ರೆಗೆ ಭೇಟಿ ನೀಡಿ, ಕಾರ್ಮಿಕರ ಆರೋಗ್ಯ ವಿಚಾರಿಸಿದರು. ಬೆಳಗ್ಗೆ ನರೇಗಾ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



