ಗದಗ: ಶರಣ ನುಲಿಯ ಚಂದಯ್ಯ ಜಯಂತ್ಯುತ್ಸವದ ಅಂಗವಾಗಿ ನುಲಿಯ ಚಂದಯ್ಯ ಭಾವಚಿತ್ರ ಮೆರವಣಿಗೆಯು ಗದಗ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಆರಂಭಗೊಂಡು ಮುಳಗುಂದ ನಾಕಾ ಮಾರ್ಗವಾಗಿ ಜಿಲ್ಲಾಡಳಿತ ಭವನ ತಲುಪಿತು. ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ವೇಳೆ ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
Advertisement