ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಚೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗ ಹಾಗೂ ಶಿಶು ಅಭಿವೃದ್ಧಿ ಯೋಜನೆ ಗದಗ ಇವರ ಸಂಯುಕ್ತಾಶ್ರಯದಲ್ಲಿ ಗದಗ ತಾಲೂಕಿನ ಪೇಟೆ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಶೈಲಜಾ ವಿನಾಯಕ ಮಾನ್ವಿ ಉದ್ಘಾಟಿಸಿದರು. ಮ.ಹ.ಅ.ಇ. ನಿರೂಪಣಾಧಿಕಾರಿ ರಾಧಾ ಜಿ. ಮಣ್ಣೂರ ಮಾತನಾಡಿ, ಪೋಷಣ ಮಾಸಾಚರಣೆ–2025ರ ಮುಖ್ಯ ವಿಷಯಗಳ ಕುರಿತು ಮಾಹಿತಿ ನೀಡಿದರು. ವೈದ್ಯಾಧಿಕಾರಿ ಮೆಹರೋಶ ಮುಲ್ಲಾ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು. ಅಂಚೆ ಕಛೇರಿಯ ಶಿವರಾಜ ಎ.ಕೆ, ಅಂಚೆ ಕಛೇರಿಯಲ್ಲಿ 0 ರಿಂದ 6 ವರ್ಷದ ಮಕ್ಕಳಿಗೆ ಉಚಿತವಾಗಿ ಬಾಲ ಆಧಾರ್ ಕಾರ್ಡ್ ಮಾಡಿಕೊಡುತ್ತಿರುವ ಮಾಹಿತಿಯನ್ನು ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ ಮಾತನಾಡಿ, ಪೌಷ್ಠಿಕ ಆಹಾರವನ್ನು ಮಕ್ಕಳು, ಗರ್ಭಿಣಿ, ಬಾಣಂತಿಯರು ಸರಿಯಾಗಿ ಸೇವಿಸಬೇಕು ಹಾಗೂ ಅದರ ಮಹತ್ವದ ಬಗ್ಗೆ ವಿವರಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಚ್.ಎಸ್. ಜೋಗೇರ, ಪೋಷಣ ಜಿಲ್ಲಾ ಸಂಯೋಜಕಿ ಸಂಗೀತಾ ಹೂಗಾರ, ಪೋಷಣ ಜಿಲ್ಲಾ ಕಾರ್ಯಕ್ರಮ ಸಹಾಯಕರಾದ ಪವನ ಕಾಟೀಗರ, ಆರೋಗ್ಯ–ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗಳು, ಗದಗ 2 ವಲಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿಯರು, ತಾಯಂದಿರು, ಮಕ್ಕಳು ಭಾಗವಹಿಸಿದ್ದರು.
ಸುಜಾತಾ ಹಾವನೂರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪತ್ತಾರ ಪ್ರಾರ್ಥಿಸಿದರು. ಸುಜಾತಾ ಹಾವನೂರ ವಂದಿಸಿದರು.