ಗರ್ಭಿಣಿಯರು ಆರೋಗ್ಯ ಕಾಳಜಿ ವಹಿಸಿ

0
Nutrition Month Program
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗ ಹಾಗೂ ಶಿಶು ಅಭಿವೃದ್ಧಿ ಯೋಜನೆ ಗದಗ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಇಲ್ಲಿನ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೋಷಣ ಮಾಸಾಚರಣೆ ಕಾರ್ಯಕ್ರಮದಲ್ಲಿ ಸೂಚಿಸಿದಂತೆ ಪೌಷ್ಠಿಕ ಆಹಾರವನ್ನು ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಸರಿಯಾಗಿ ಸೇವಿಸಬೇಕು ಎಂದು ತಿಳಿಸಿ, ಅದರ ಮಹತ್ವದ ಬಗ್ಗೆ ವಿವರವಾಗಿ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪದ್ಮಾವತಿ ಜಿ ಮಾತನಾಡಿ, ಸೆಪ್ಟೆಂಬರ್ ಮಾಹೆಯಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಏಕ್ ಪೇಡ್ ಮಾಕೆ ನಾಮ್ (ತಾಯಿಯ ಹೆಸರಿನಲ್ಲಿ ಒಂದು ಗಿಡ) ನೆಡುವುದರ ಮೂಲಕ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಉದ್ಘಾಟನೆ ಮಾಡಲಾಗಿದೆ. ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಪೌಷ್ಠಿಕ ಕೈತೋಟಗಳನ್ನು ನಿರ್ಮಿಸಿ ಪೌಷ್ಠಿಕ ಆಹಾರವನ್ನು ಸೇವಿಸಬೇಕು. ಇದರಿಂದ ನಮ್ಮ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಬಹುದು ಎಂದು ಹೇಳಿದರು.

ಜಿಲ್ಲಾ ನಿರೂಪಣಾಧಿಕಾರಿ ರಾಧಾ ಜಿ.ಮಣ್ಣೂರ ಮಾತನಾಡಿ, ಮಕ್ಕಳ ಪೌಷ್ಠಿಕತೆ, ಗರ್ಭಿಣಿ-ಬಾಣಂತಿಯರಲ್ಲಿನ ರಕ್ತಹೀನತೆ ಹಾಗೂ ಇಲಾಖೆಯ ವಿವಿಧ ಯೋಜನೆಯ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಪೋಷಣ ಜಿಲ್ಲಾ ಸಂಯೋಜಕಿ ಸಂಗೀತಾ ಹೂಗಾರ ಮಕ್ಕಳ ಬೆಳವಣಿಗೆ, ಮೇಲ್ವೀಚಾರಣೆ ಕುರಿತು ಮಾಹಿತಿ ನೀಡಿದರು. ಪವನ ಕಾಟೀಗರ ಉಪಸ್ಥಿತರಿದ್ದರು. ಸಭೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಚ್.ಎಸ್ ಜೋಗೇರ, ಮಂಜುಳಾ ಹಬೀಬ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿಯರು, ತಾಯಂದಿರು, ಮಕ್ಕಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಭಾಗವಹಿಸಿದ್ದರು.

ಮಂಜುಳಾ ಹಬೀಬ ವಲಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮಂಜುಳಾ ಕಮತ್ ವಂದಿಸಿದರು.

ಮಾತೃವಂದನಾ ಸಂಯೋಜಕ ಎಸ್.ಜಿ. ಪೂಜಾರ ಮಾತನಾಡಿ, 1ನೇ ಗರ್ಭೀಣಿ ಹಾಗೂ ಎರಡನೇ ಮಗು ಹೆಣ್ಣುಮಗು ಹೊಂದಿರುವ ಬಾಣಂತಿಯರಿಗೆ ಕ್ರಮವಾಗಿ 5 ಸಾವಿರ ಮತ್ತು 6 ಸಾವಿರ ರೂಗಳ ಧನಸಹಾಯವನ್ನು ನೇರ ನಗದು ವರ್ಗಾವಣೆ ಮೂಲಕ ಆರ್ಥಿಕ ಸಹಾಯ ಇಲಾಖೆಯಿಂದ ಪಡೆದುಕೊಳ್ಳಬಹುದೆಂದು ಹೇಳಿದರು.

 


Spread the love

LEAVE A REPLY

Please enter your comment!
Please enter your name here