ಬೆಂಗಳೂರು: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ವಿಚಾರವಾಗಿ ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಎಲ್ಲಾ ಧರ್ಮದವರಿಗೂ ಇದೆ. ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ. ಎಲ್ಲಾ ಸಮುದಾಯದವರು ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗ್ತಾರೆ.
ಅದು ಅವರ ನಂಬಿಕೆ. ನಾವು ಮಸೀದಿ, ಚರ್ಚ್ಗೆ ಹೋಗ್ತೀವಿ, ಬಸ್ತಿ, ಜೈನ ದೇವಾಲಯ, ಗುರುದ್ವಾರಗೆ ಹೋಗ್ತೀವಿ. ಗುರುದ್ವಾರಕ್ಕೆ ಹೋಗೋದು ತಪ್ಪಿಸೋಕೆ ಅಗುತ್ತಾ? ಹಿಂದೂ ದೇವಾಲಯಕ್ಕೆ ಅವರನ್ನ ಬರೋದು ತಪ್ಪಿಸೋಕೆ ಆಗುತ್ತಾ? ಯಾರ್ ಬೇಕಾದ್ರು ಹೋಗಬಹುದು ಎಂದಿದ್ದಾರೆ.
ಎಷ್ಟೋ ಜನ ಹಿಂದೂಗಳು ಮುಸ್ಲಿಂ ಆಗಿ ಮತಾಂತರ ಆಗಿಲ್ವ? ಅವರ ಧರ್ಮ ಪಡೆದಿಲ್ವ? ಕ್ರಿಶ್ಚಿಯನ್ ಧರ್ಮ ಸ್ವೀಕಾರ ಮಾಡಿಲ್ವ? ಕೆಲವು ಹಿಂದೂ ಸಂಸ್ಕೃತಿಯನ್ನ ಮುಸ್ಲಿಮರು ಪ್ರಾಕ್ಟೀಸ್ ಮಾಡ್ತಿಲ್ವ? ಹಲವು ಉದಾಹರಣೆಗಳಿವೆ. ಇದೆಲ್ಲವೂ ರಾಜಕೀಯ. ಯಾಕೆ ಬೆಟ್ಟ ಹತ್ತಬಾರದು? ಯಾಕೆ ಉದ್ಘಾಟನೆ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ.