ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿ ನಿಂದಿಸಿದ್ದ ಪ್ರಕರಣದಲ್ಲಿ ಸೈಬರ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದ್ದು, ಈ ಪೈಕಿ ಓರ್ವ ಬೆಂಗಳೂರು ಮೂಲದವನು ಎಂದು ತಿಳಿದುಬಂದಿದೆ.
2025ರ ಡಿಸೆಂಬರ್‌ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಹೇಳಿಕೆ ನೀಡಿದ ಬಳಿಕ, ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳು ಹರಿದಾಡಿದ್ದವು. ಇದರಿಂದ ಅಸಮಾಧಾನಗೊಂಡ ವಿಜಯಲಕ್ಷ್ಮಿ, 15 ಇನ್ಸ್ಟಾಗ್ರಾಂ ಐಡಿ ಹಾಗೂ 150ಕ್ಕೂ ಹೆಚ್ಚು ಕೆಟ್ಟ ಕಾಮೆಂಟ್‌ಗಳ ವಿರುದ್ಧ ಫೋಟೋ ಸಮೇತ ಸೈಬರ್ ಪೊಲೀಸರಿಗೆ ದೂರು ನೀಡಿದ್ದರು.
ಈ ದೂರಿನ ಆಧಾರದಲ್ಲಿ ತನಿಖೆ ಕೈಗೊಂಡ ಸೈಬರ್ ಪೊಲೀಸರು 15 ಐಡಿಗಳ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.
ಇತ್ತೀಚೆಗೆ ವಿಜಯಲಕ್ಷ್ಮಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರನ್ನು ಭೇಟಿ ಮಾಡಿ, ತಮ್ಮ ದೂರಿನ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಪರಿಶೀಲಿಸುವುದಾಗಿ ಆಯುಕ್ತರು ಭರವಸೆ ನೀಡಿದ್ದರು.



