ಅಶ್ಲೀಲ ಕಾಮೆಂಟ್ಸ್: ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ!

0
Spread the love

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದವರ ವಿರುದ್ಧ ನಟಿ ರಮ್ಯಾ ದೂರು ಕೊಟ್ಟರೆ, 3 ರಿಂದ 7 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಎಚ್ಚರಿಕೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರಮ್ಯಾ ಅಂತಲ್ಲ, ಬೇರೆ ಬೇರೆ ಕಡೆ ಏನಾದರೂ ಆದಾಗ ಈ ತರ ಕೆಟ್ಟದಾಗಿ ಕಮೆಂಟ್ ಮಾಡುತ್ತಾರೆ. ತುಂಬಾ ಜನ ಸೆಲೆಬ್ರಿಟಿಗಳು ನಮ್ಮಲ್ಲಿಗೆ ಬಂದು ದೂರು ಕೊಡುತ್ತಾರೆ. ಯಾರು ಅಶ್ಲೀಲ ಪದವನ್ನು ಬಳಕೆ ಮಾಡಬೇಡಿ. ಯಾವ ಮಹಿಳೆಗೂ ಕೂಡ ಅಗೌರವ ತೋರಬೇಡಿ.

ನಿಮ್ಮ ಕೆಟ್ಟ ಪದಬಳಕೆಯಿಂದಾಗಿ ಮುಂದೊಂದು ದಿನ ಜೈಲಿಗೂ ಹೋಗಬಹುದು. ಕಾನೂನಿನ ಪ್ರಕಾರ ಇದು ದೊಡ್ಡ ಅಪರಾಧ. ಈ ರೀತಿ ಒಬ್ಬರನ್ನು ನೋಡಿ ಇನ್ನೊಬ್ಬರು ಮಾಡೋದು ಬೇಡ. ಇದು ಸರಿಯಲ್ಲ. ಒಂದು ವೇಳೆ ರಮ್ಯಾ ದೂರು ದಾಖಲು ಮಾಡಿದರೆ ಖಂಡಿತಾ ಎಫ್‌ಐಆರ್ ಆಗುತ್ತದೆ. ಬಳಿಕ ಮೂರರಿಂದ ಏಳು ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆಯಿರುತ್ತದೆ ಎಂದು ಎಚ್ಚರಿಸಿದ್ದಾರೆ

ಸೋಷಿಯಲ್ ಮೀಡಿಯಾದಲ್ಲಿ ಮಾನಹಾನಿ ಪ್ರಕರಣ ಮಾಡಿದರೆ ಅದಕ್ಕೆ ತುಂಬಾ ಗಂಭೀರ ಶಿಕ್ಷೆ ಇದೆ. ಬಹುತೇಕರಿಗೆ ಇದರ ಬಗ್ಗೆ ಅರಿವೇ ಇಲ್ಲ. ಸದ್ಯ ಮಹಿಳಾ ಆಯೋಗ ರಮ್ಯಾ ವಿಚಾರವಾಗಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಪೊಲೀಸ್ ಕಮೀಷನರ್‌ಗೆ ಪತ್ರ ಬರೆಯಲು ನಿರ್ಧರಿಸಿದೆ. ಇಲ್ಲದೇ ಹೋದರೆ ಇದೇ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here