ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸಂಬಂಧ ಸೂಕ್ಷ್ಮ ವೀಕ್ಷಕರ ತರಬೇತಿ ಕಾರ್ಯಾಗಾರವು ಶುಕ್ರವಾರ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ನಡೆಯಿತು.
ಹಾವೇರಿ ಲೋಕಸಭಾ ಚುನಾವಣಾ ಸಾಮಾನ್ಯ ವೀಕ್ಷಕರಾದ ಆದೇಶ್ ಟೈಟಮಾರೆ ಐಎಎಸ್ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಬಳಿಕ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಚುನಾವಣಾ ಅಯೋಗವು ಸೂಕ್ಷ್ಮ ವೀಕ್ಷಕರಿಗೆ ನೀಡಿದ ಜವಾಬ್ದಾರಿ ತುಂಬಾ ಪ್ರಾಮುಖ್ಯತೆ ಪಡೆದಿದ್ದು, ಎಲ್ಲರೂ ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಮತದಾನ ಕೇಂದ್ರದಲ್ಲಿ ಯಾವುದೇ ರೀತಿಯ ದೋಷ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು. ಚುನಾವಣಾ ಅಯೋಗದ ನಿರ್ದೇಶನ ಹಾಗೂ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಮಾತನಾಡಿ, ಸೂಕ್ಷ್ಮ ವೀಕ್ಷಕರು ಚುನಾವಣಾ ಅಯೋಗದ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಇದ್ದರು.