HomePolitics Newsಶಾಸಕರ ಖರೀದಿಗೆ 50 ಕೋಟಿ ಅಲ್ಲ 100 ಕೋಟಿ ಆಫರ್: ಸ್ಪೋಟಕ ಹೇಳಿಕೆ ಕೊಟ್ಟ ಮಂಡ್ಯ...

ಶಾಸಕರ ಖರೀದಿಗೆ 50 ಕೋಟಿ ಅಲ್ಲ 100 ಕೋಟಿ ಆಫರ್: ಸ್ಪೋಟಕ ಹೇಳಿಕೆ ಕೊಟ್ಟ ಮಂಡ್ಯ ಶಾಸಕ!

For Dai;y Updates Join Our whatsapp Group

Spread the love

ಮಂಡ್ಯ: ಬಿಜೆಪಿಯಿಂದ 50 ಕೋಟಿ ಅಲ್ಲ, 100 ಕೋಟಿ ರೂಪಾಯಿ ಆಫರ್ ಬಂದಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್​ ಗಣಿಗ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು,  ನಮ್ಮತ್ರ ದಾಖಲೆಗಳಿವೆ. ಸೂಕ್ತ ಸಮಯದಲ್ಲಿ ಮಾಧ್ಯಮಗಳ ಮುಂದೆ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.  ಕಳೆದ ಸರ್ಕಾರದಲ್ಲಿ ಲೂಟಿ ಮಾಡಿರುವ ಹಣದಿಂದ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿ ಪ್ಲಾನ್ ಮಾಡಿದೆ. ಕೆಲವರು ಪೆನ್‌ಡ್ರೈವ್ ತೋರಿಸಿ ರಿವಿಲ್ ಮಾಡಿಲ್ಲ, ನಾವು ತೋರಿಸಿದರೆ ಖಂಡಿತ ರಿವಿಲ್ ಮಾಡುತ್ತೇವೆ.

ನಮ್ಮ ಬಳಿ ಆಪರೇಷನ್ ಕಮಲಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳಿವೆ. ಕಿತ್ತೂರು ಶಾಸಕ ಬಾಬು, ಚಿಕ್ಕಮಗಳೂರು ಶಾಸಕ ತಮ್ಮಣ್ಣರನ್ನ ಯಾಕೆ ಸಂಪರ್ಕಿಸಿದ್ದರು? ಯಾವ್ಯಾವ ಹೋಟೆಲ್, ಏರ್‌ಪೋರ್ಟ್, ಗೆಸ್ಟ್ ಹೌಸ್‌ನಲ್ಲಿ ಸಂಪರ್ಕಿಸಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಆಡಿಯೋ, ವಿಡಿಯೋ, ಸಿಡಿ, ಪೆನ್‌ಡ್ರೈವ್ ಸೇರಿದಂತೆ ಮುಂದುವರಿದು ಐ ಕ್ಲೌಡ್ ಕೂಡ ಇದೆ ಎಂದರು.

ಬಿಜೆಪಿಯನ್ನು ಇಬ್ಬರು ಕಾಂಗ್ರೆಸ್ ಶಾಸಕರು ಸಂಪರ್ಕಿಸಿದ್ದಾರೆ. ಶೀಘ್ರದಲ್ಲೇ ಆಪರೇಷನ್ ಕಮಲದ ಸಾಕ್ಷಿ ಬಿಡುಗಡೆ ಮಾಡುತ್ತೇನೆ. ಬಿಜೆಪಿ-ಜೆಡಿಎಸ್ ಸರ್ಕಾರ ಬೀಳಿಸುವ ತವಕದಲ್ಲಿದ್ದಾರೆ. ಕಾಂಗ್ರೆಸ್‌ನ 50 ಶಾಸಕರಿಗೆ ಆಮಿಷ ಒಡ್ಡಲಾಗಿದೆ. ಕಾಂಗ್ರೆಸ್ ಶಾಸಕರು 50 ಕೋಟಿ ರೂ.ಗೆ ಬಗ್ಗಿಲ್ಲ ಎಂದು ಶಾಸಕರಿಗೆ ತಲಾ 100 ಕೋಟಿ ಆಫರ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಬಿಜೆಪಿಯವರಿಗೆ ಹಿಂದಿನ ಸರ್ಕಾರದಲ್ಲಿ ಮಾಡಿದ್ದ ಹಗರಣಗಳ ಕಂಟಕ ಸುತ್ತಿಕೊಂಡಿದೆ. ಅದರಿಂದ ಬಚಾವಾಗಲು, ಆ ಅಕ್ರಮದ ದುಡ್ಡನ್ನೇ ಮುಂದಿಟ್ಟುಕೊಂಡು ಸರ್ಕಾರ ಬೀಳಿಸಲು ಯತ್ನಿಸುತ್ತಿದ್ದಾರೆ. ಅದರ ಜತೆಗೆ ಕೇಂದ್ರ ಸರ್ಕಾರದ ಬೆಂಬಲ ಇದೆ. ಇದೀಗ ಜೆಡಿಎಸ್​​ ಕೂಡ ಜತೆಗೂಡಿದೆ ಎಂದು ಗಣಿಗ ಟೀಕಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!