ಬೆಂಗಳೂರು: ಬಿಬಿಎಂಪಿ ಮೃತರ ಕುಟುಂಬಗಳಿಗೆ ನೆರವು ಕೊಡಲಿದೆ. ಇದು ದುರಾದೃಷ್ಟಕರ ಘಟನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಬಿಬಿಎಂಪಿ ಕಸದ ಲಾರಿಗೂ ಇಬ್ಬರು ಬಲಿ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ರಾತ್ರಿ ಅಪಘಾತ ಆಗಿದೆ. ಇಬ್ಬರು ಮೃತಪಟ್ಟಿದ್ದಾರೆ. ಬಿಬಿಎಂಪಿ ಮೃತರ ಕುಟುಂಬಗಳಿಗೆ ನೆರವು ಕೊಡಲಿದೆ. ಇದು ದುರಾದೃಷ್ಟಕರ ಘಟನೆ ಎಂದು ಹೇಳಿದರು.
ಇನ್ನೂ ಮುಡಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಪಾದಯಾತ್ರೆ ನಡೆಸಲು ನಿರ್ಧರಿಸಿವೆ. ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಎಂದು ಹೇಳಿದರು.



