• About
  • Advertise
  • Privacy & Policy
  • Contact
Monday, November 16, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ: ‘ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ’ ಎಂದ ತಂಗಡಗಿ

graochandan1@gmail.com by graochandan1@gmail.com
September 28, 2026
in Karnataka News
0
SHARES
2
VIEWS
Share on Facebook

ಕೊಪ್ಪಳ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸೋಮವಾರ ಅಧಿಕೃತ ಆಹ್ವಾನ ನೀಡಿದ್ದಾರೆ. ಫಲಪುಷ್ಪ ನೀಡಿ ಶ್ರೀಗಳನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಯಿತು.

ಈ ಬಾರಿಯ ಮೈಸೂರು ದಸರಾ ಮಹೋತ್ಸವ ಅಕ್ಟೋಬರ್ 11ರಂದು ಆರಂಭವಾಗಲಿದ್ದು, ಚಾಮುಂಡಿಬೆಟ್ಟದಲ್ಲಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ನಾಡಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 24ರಂದು ವಿಧಾನಸಭೆಯಲ್ಲಿ ಶ್ರೀಗಳ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದರು.

‘ಶ್ರೀಗಳು ಪ್ರೀತಿ-ವಿಶ್ವಾಸದಿಂದ ಒಪ್ಪಿಕೊಂಡಿದ್ದಾರೆ’

ಗವಿಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಜ್ ತಂಗಡಗಿ, “ಈ ವರ್ಷದ ದಸರಾ ಉದ್ಘಾಟನೆಗೆ ಕೊಪ್ಪಳದ ಶ್ರೀಗಳು ಆಯ್ಕೆಯಾಗಿರುವುದು ನಮಗೆ ಖುಷಿ ತಂದಿದೆ. ಶ್ರೀಗಳನ್ನು ಒಪ್ಪಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದರು. ಅದರಂತೆ ಶ್ರೀಗಳು ಪ್ರೀತಿ ಮತ್ತು ವಿಶ್ವಾಸದಿಂದ ಒಪ್ಪಿಕೊಂಡಿದ್ದಾರೆ” ಎಂದು ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ದಸರಾ ಉದ್ಘಾಟಿಸುವಂತೆ ಮನವಿ ಮಾಡಿದ್ದು, ಅದಕ್ಕೆ ಶ್ರೀಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಈ ಹಿಂದೆ ವಿಧಾನಸಭೆಯಲ್ಲೇ ತಿಳಿಸಿದ್ದರು.

‘ಆಹ್ವಾನ ತಿರಸ್ಕರಿಸಿದ್ದಾರೆ ಎಂಬುದು ಸುಳ್ಳು ಸುದ್ದಿ’

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ದಸರಾ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಇದನ್ನು ಗವಿಮಠದ ಮೂಲಗಳು ಹಾಗೂ ಸಚಿವ ಶಿವರಾಜ್ ತಂಗಡಗಿ ತಳ್ಳಿಹಾಕಿದ್ದಾರೆ. ಶ್ರೀಗಳು ದಸರಾ ಉದ್ಘಾಟಿಸಲಿದ್ದಾರೆ ಎಂದು ಮಠದ ಮೂಲಗಳು ಸ್ಪಷ್ಟಪಡಿಸಿವೆ.

“ಕೆಲವರು ಅಪಪ್ರಚಾರ ಮಾಡುವ ಕೆಲಸ ಮಾಡಿದ್ದಾರೆ. ಶ್ರೀಗಳು ಸೂಕ್ಷ್ಮ ಸ್ವಭಾವದವರು. ಅಧಿಕೃತ ಸಾಕ್ಷ್ಯವಿಲ್ಲದೆ ಸುಳ್ಳು ಮಾಹಿತಿ ಹರಡುವುದು ಸರಿಯಲ್ಲ. ಇಂತಹ ಮಾಹಿತಿ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ” ಎಂದು ತಂಗಡಗಿ ಹೇಳಿದರು.

ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದಡಿ ಮಾಧ್ಯಮ ಸಂಸ್ಥೆಯೊಂದರ ಡಿಜಿಟಲ್ ವಿಭಾಗದ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಕೊಪ್ಪಳ ಎಸ್ಪಿ ಸಾಹಿಲ್ ಬಾಗ್ಲಾ ತಿಳಿಸಿದ್ದಾರೆ.

‘ನಮ್ಮ ಜಿಲ್ಲೆಗೆ ಸಿಕ್ಕಿರುವ ಸೌಭಾಗ್ಯ’

“ಗವಿಸಿದ್ದೇಶ್ವರ ಶ್ರೀಗಳಿಂದ ಮೈಸೂರು ದಸರಾ ಉದ್ಘಾಟನೆಯಾಗುತ್ತಿರುವುದು ಕೊಪ್ಪಳ ಜಿಲ್ಲೆಗೆ ಸಿಕ್ಕಿರುವ ಸೌಭಾಗ್ಯ. ಇಂತಹ ಶ್ರೀಗಳಿಂದ ನಾಡಹಬ್ಬ ಉದ್ಘಾಟನೆ ಮಾಡಿಸುವುದು ಸರ್ಕಾರಕ್ಕೂ ಹೆಮ್ಮೆಯ ಸಂಗತಿ” ಎಂದು ತಂಗಡಗಿ ಹೇಳಿದರು.

“ಶ್ರೀಗಳಿಗೆ ಯಾವುದೇ ಅದ್ದೂರಿತನ ಬೇಕಿಲ್ಲ. ಅದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ಹಿಂದೆ ನಾನು ಮೂವರಿಗೆ ದಸರಾ ಉದ್ಘಾಟನೆಯ ಆಹ್ವಾನ ನೀಡಿದ್ದೇನೆ. ಆದರೆ ಈ ರೀತಿಯ ಗೊಂದಲ ಎಂದಿಗೂ ಆಗಿರಲಿಲ್ಲ. ದಸರಾ ಆಹ್ವಾನದ ಬಗ್ಗೆ ಸರ್ಕಾರ ಮತ್ತು ಮಠದಿಂದ ಬರುವ ಅಧಿಕೃತ ಮಾಹಿತಿಯನ್ನೇ ಪರಿಗಣಿಸಬೇಕು” ಎಂದು ಅವರು ಮನವಿ ಮಾಡಿದರು.

ಅ.11ಕ್ಕೆ ದಸರಾ ಉದ್ಘಾಟನೆ

ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಕೊಪ್ಪಳ ಗವಿಮಠದ 18ನೇ ಪೀಠಾಧಿಪತಿಯಾಗಿದ್ದು, 2002ರಲ್ಲಿ ಪೀಠಾಧಿಪತಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಜಲ ಸಂರಕ್ಷಣೆ, ಶಿಕ್ಷಣ, ಅನ್ನದಾಸೋಹ ಸೇರಿದಂತೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ಗವಿಮಠ ತೊಡಗಿಸಿಕೊಂಡಿದೆ. ಅಕ್ಟೋಬರ್ 11ರಂದು ಚಾಮುಂಡಿಬೆಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀಗಳು ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.

Tags: BreakingNewsgavimathGavisiddeshwaraSwamijiKarnatakaMysuruDasaraNewsHeadlinesShivarajTangadagiVijayasakshivijayasakshinews
ShareSendShare
Previous Post

ವೆಸ್ಟ್ ಇಂಡೀಸ್ ಕ್ರಿಕೆಟಿಗರಿಗೆ ಬಿಗ್ ಶಾಕ್; ಪಂದ್ಯಾವಳಿಗಳಿಗೆ ಬ್ರೇಕ್, ಆಟಗಾರರ ವೇತನಕ್ಕೂ ಕತ್ತರಿ!

Next Post

ಸಿನಿಮಾ ಹೆಸರಲ್ಲಿ ವಿದೇಶಕ್ಕೆ ಹಣ: ನಟಿ ರಕುಲ್ ಪ್ರೀತ್ ಸಿಂಗ್ ಮನೆಗೆ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳು..!

graochandan1@gmail.com

graochandan1@gmail.com

Next Post

ಸಿನಿಮಾ ಹೆಸರಲ್ಲಿ ವಿದೇಶಕ್ಕೆ ಹಣ: ನಟಿ ರಕುಲ್ ಪ್ರೀತ್ ಸಿಂಗ್ ಮನೆಗೆ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳು..!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಧಾರವಾಡ: ಅನರ್ಹರಿಗೆ ಗೃಹಲಕ್ಷ್ಮಿ ಹಣ ಕಟ್? ಫಲಾನುಭವಿಗಳ ಮರುಪರಿಶೀಲನೆಗೆ ಡಿಸಿ ಸೂಚನೆ

ಧಾರವಾಡ: ಅನರ್ಹರಿಗೆ ಗೃಹಲಕ್ಷ್ಮಿ ಹಣ ಕಟ್? ಫಲಾನುಭವಿಗಳ ಮರುಪರಿಶೀಲನೆಗೆ ಡಿಸಿ ಸೂಚನೆ

November 16, 2026
ಪಿಡಬ್ಲ್ಯುಡಿ ಅಧಿಕಾರಿಗಳ ವಿರುದ್ಧ ರಾಯರಡ್ಡಿ ಗರಂ: ಕಾರ್ಯದರ್ಶಿಗೆ ಕರೆ ಮಾಡಿ ಕ್ರಮಕ್ಕೆ ಸೂಚನೆ

ಪಿಡಬ್ಲ್ಯುಡಿ ಅಧಿಕಾರಿಗಳ ವಿರುದ್ಧ ರಾಯರಡ್ಡಿ ಗರಂ: ಕಾರ್ಯದರ್ಶಿಗೆ ಕರೆ ಮಾಡಿ ಕ್ರಮಕ್ಕೆ ಸೂಚನೆ

November 16, 2026
ಹಾರ್ಟ್ ಅಟ್ಯಾಕ್ ಮತ್ತು ಹಾರ್ಟ್ ಫೇಲ್ಯೂರ್ ಒಂದೇನಾ? ಇವೆರಡರ ನಡುವಿನ ವ್ಯತ್ಯಾಸ ತಿಳಿಯಿರಿ!

ಹಾರ್ಟ್ ಅಟ್ಯಾಕ್ ಮತ್ತು ಹಾರ್ಟ್ ಫೇಲ್ಯೂರ್ ಒಂದೇನಾ? ಇವೆರಡರ ನಡುವಿನ ವ್ಯತ್ಯಾಸ ತಿಳಿಯಿರಿ!

November 16, 2026
ಸ್ಟಿಂಗ್ ಆಪರೇಷನ್ ಪ್ರಕರಣ: ಮೂರನೇ ಬಾರಿ ಸಿಸಿಬಿ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ

ಸ್ಟಿಂಗ್ ಆಪರೇಷನ್ ಪ್ರಕರಣ: ಮೂರನೇ ಬಾರಿ ಸಿಸಿಬಿ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ

November 16, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಧಾರವಾಡ: ಅನರ್ಹರಿಗೆ ಗೃಹಲಕ್ಷ್ಮಿ ಹಣ ಕಟ್? ಫಲಾನುಭವಿಗಳ ಮರುಪರಿಶೀಲನೆಗೆ ಡಿಸಿ ಸೂಚನೆ

ಧಾರವಾಡ: ಅನರ್ಹರಿಗೆ ಗೃಹಲಕ್ಷ್ಮಿ ಹಣ ಕಟ್? ಫಲಾನುಭವಿಗಳ ಮರುಪರಿಶೀಲನೆಗೆ ಡಿಸಿ ಸೂಚನೆ

November 16, 2026
ಪಿಡಬ್ಲ್ಯುಡಿ ಅಧಿಕಾರಿಗಳ ವಿರುದ್ಧ ರಾಯರಡ್ಡಿ ಗರಂ: ಕಾರ್ಯದರ್ಶಿಗೆ ಕರೆ ಮಾಡಿ ಕ್ರಮಕ್ಕೆ ಸೂಚನೆ

ಪಿಡಬ್ಲ್ಯುಡಿ ಅಧಿಕಾರಿಗಳ ವಿರುದ್ಧ ರಾಯರಡ್ಡಿ ಗರಂ: ಕಾರ್ಯದರ್ಶಿಗೆ ಕರೆ ಮಾಡಿ ಕ್ರಮಕ್ಕೆ ಸೂಚನೆ

November 16, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper