ಮೈಸೂರು ದಸರಾಗೆ ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ..!

0
Spread the love

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಇಂದು ಆಹ್ವಾನ ನೀಡಲಾಯಿತು.

Advertisement

ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಫಲಪುಷ್ಪ ನೀಡಿ ರೇಷ್ಮೆ ಶಾಲು, ಹಾರ ಹಾಕಿ ಆಹ್ವಾನ ಪತ್ರಿಕೆ ನೀಡಿ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಮಂತ್ರಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಜಿಪಂ ಸಿಇಓ ಎಸ್.ಯುಕೇಶ್ ಕುಮಾರ್, ಚಾಮುಂಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here