ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬುಧವಾರ ರಾತ್ರಿ ಗೊಜನೂರು ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಮನೆಯ ಮೇಲ್ಚಾವಣಿಯ ಮೇಲೆ ಮರ ಬಿದ್ದುದ್ದರಿಂದ ಇಟ್ಟಿಗೆಗಳು ಮನೆಯೊಳಗೆ ಇದ್ದ ನಿರ್ಮಲಾ ಬಸನಗೌಡ ಬಾಗವಾಡ ಇವರ ಮೇಲೆ ಬಿದ್ದು ಗಾಯಗೊಂಡಿದ್ದರು.
Advertisement
ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಗುರುವಾರ ಸುದ್ದಿ ತಿಳಿದ ತಹಸೀಲ್ದಾರ ವಾಸುದೇವ ಸ್ವಾಮಿ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅಲ್ಲದೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೂ ಅಧಿಕಾರಿಗಳು ಭೇಟಿ ನೀಡಿದರು. ಈ ವೇಳೆ ಗ್ರಾ.ಪಂ ಅಭಿವೃದ್ದಿ ಅಧಿಕಾರಿಗಳು, ಗ್ರಾಮ ಅಧಿಕಾರಿಗಳು ಹಾಜರಿದ್ದರು.
ಮಳೆಯಿಂದಾಗಿ ಐದಾರು ಮನೆಗಳ ತಗಡಿನ ಶೆಡ್ ಹಾರಿ ಹೋಗಿದ್ದರಿಂದ ಜನರು ಸಾಕಷ್ಟು ಪರದಾಡಿದ್ದರು.