ಅಧಿಕಾರಿಗಳ ಎಡವಟ್ಟು: ಸಂಪ್ರದಾಯ ಮುರಿದು ಬಾಗಿನದ ದಿನವೇ ಬಾಡೂಟ ಆಯೋಜನೆ

0
Spread the love

ಮಂಡ್ಯ: ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು-ನೀರು ಬಿಟ್ಟಿರುವ ಘಟನೆ ನಡೆದಿದೆ. ಹೌದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಶಾಸಕರು ಬಾಗಿನ ಅರ್ಪಣೆ ಮಾಡಿ ತೆರಳಿದ್ದಾರೆ. ಆದ್ರೆ ಈ ಬಾಗಿನ ಕಾರ್ಯಕ್ರಮದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಕೆಆರ್​ಎಸ್​​ನ​​ ಖಾಸಗಿ ಹೋಟೆಲ್ ನಲ್ಲಿ ಬಾಡೂಟ ಆಯೋಜನೆ ಮಾಡಲಾಗಿದ್ದು,

Advertisement

ಈ ಮೂಲಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು-ನೀರು ಬಿಟ್ಟಿದ್ದಾರೆ.ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳ ಬೆಂಬಲಿಗರು KRSನ ಖಾಸಗಿ ಹೋಟೆಲ್ ನಲ್ಲಿ ಭರ್ಜರಿ ಬಾಡೂಟ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಸಂಪ್ರದಾಯ ಮುರಿದಿದ್ದಾರೆ. ಈ ಹಿಂದೆ ಎಂದೂ ಬಾಗಿನ ಸಲ್ಲಿಸಿದ ದಿವಸ ಬಾಡೂಟ ಆಯೋಜಿಸಿದ್ದ ಉದಾಹರಣೆಗಳೇ ಇಲ್ಲ. ಇದೇ ಮೊದಲ ಬಾರಿಗೆ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ.

 

 


Spread the love

LEAVE A REPLY

Please enter your comment!
Please enter your name here