ಅಧಿಕಾರಿಗಳು ಸರಿಯಾಗಿ ಕರ್ತವ್ಯವನ್ನು ನಿರ್ವಹಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಲ್ಲಿ ವಿಳಂಬ ಆಗುತ್ತಿರುವ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಡಾ. ಚಂದ್ರು ಲಮಾಣಿ ಅವರು ಲಕ್ಷ್ಮೇಶ್ವರದಲ್ಲಿ ಮೇಲ್ಮಟ್ಟದ ಜಲಾಗಾರ, ಹಾಗೂ ಎಲ್&ಟಿ ಪೈಪ್‌ಲೈನ್ ಅಳವಡಿಸಿರುವ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಕುಡಿಯುವ ನೀರು ಪೂರೈಕೆಯಲ್ಲಿ ವಿಳಂಬ ಹಾಗೂ ಸಮಸ್ಯೆಗಳಾಗುತ್ತಿವೆ. ಈ ಬಗ್ಗೆ ಸಾಕಷ್ಟು ಜನರಿಂದ ದೂರುಗಳು ಬರುತ್ತಿವೆ. ನೀರು ಪೂರೈಕೆ ಆಗದ ಕಾರಣ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅವರು ನೀರಿನ ಸಮಸ್ಯೆ ಕುರಿತು ನನ್ನ ಹತ್ತಿರ ದೂರು ತರುತ್ತಿದ್ದಾರೆ. ನೀರು ಪೂರೈಕೆಯಲ್ಲಿ ತಾರತಮ್ಯವಾಗುತ್ತಿದೆ ಮತ್ತು ಅನೇಕರು ತಮ್ಮ ಪ್ರಭಾವ ಬಳಸಿಕೊಂಡು ಅನಧಿಕೃತವಾಗಿ ಡೈರೆಕ್ಟ್ ಲೈನ್‌ನಿಂದ ನಳ ಪಡೆದು ನಿರಂತರ ನೀರು ಪಡೆದುಕೊಳ್ಳುತ್ತಿದ್ದಾರೆ.

ಇಂತಹ ನಳಗಳ ಸಂಪರ್ಕ ಕಡಿತಗೊಳಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ನೀರು ಪೂರೈಸುವ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಬೇಕು. ಇಲ್ಲದಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ, ಮಂಜುನಾಥ ಮುದಗಲ್ಲ, ಬಸವಣ್ಣೆಪ್ಪ ನಂದೆಣ್ಣವರ, ನಿಂಗಪ್ಪ ಬನ್ನಿ, ಹನಮಂತಪ್ಪ ನಂದೆಣ್ಣವರ ಮತ್ತಿತರರು ಇದ್ದರು.


Spread the love

LEAVE A REPLY

Please enter your comment!
Please enter your name here