ಹೊಸಕೋಟೆ: 15 ವರ್ಷದ ಬಾಲಕಿಗೆ ಮದುವೆ ಮಾಡಲು ಪೋಷಕರು ಮುಂದಾಗಿದ್ದನ್ನು ಅಧಿಕಾರಿಗಳು ತಪ್ಪಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕನಕ ಭವನದಲ್ಲಿ ನಡೆದಿದೆ. ಆರತಕ್ಷತೆ ಮುಗಿಸಿ ಮದುವೆಗೆ ಅರಿಶಿನ ಶಾಸ್ತ್ರ ಮಾಡುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಅಧಿಕಾರಿಗಳು ಮದುವೆ ನಿಲ್ಲಿಸಿದ್ದಾರೆ.ಹೊಸಕೋಟೆ ನಗರದ ಕನಕ ಭವನದಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಮದುವೆ ನಿಲ್ಲಿಸಿ, ಬಾಲಕಿಯನ್ನು ವಶಕ್ಕೆ ಪಡೆದು ಮಹಿಳಾ ಕೇಂದ್ರಕ್ಕೆ ಕರೆತಂದಿದ್ದಾರೆ. ಪೋಷಕರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



