ಕೊಣ್ಣೂರು ಚೆಕ್‌ಪೋಸ್ಟ್ ಗೆ ಅಧಿಕಾರಿಗಳ ಭೇಟಿ

0
checkpost
Spread the love

ವಿಜಯಸಾಕ್ಷಿ ಸುದ್ದಿ, ನರಗುಂದ : ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ನರಗುಂದ ಕಾರ್ಯನಿರ್ವಾಹಕ ಅಧಿಕಾರಿ ಬಿರಾದರ್ ನರಗುಂದ ವಿಧಾನಸಭಾ ಕ್ಷೇತ್ರದ ಚುನಾವಣೆ ತರಬೇತಿ ಕೇಂದ್ರ ಹಾಗೂ ಕೊಣ್ಣೂರ ಚೆಕ್‌ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಕೆಲವು ವಾಹನಗಳನ್ನು ತಡೆದ ಇಓ ಅವರು, ಸೂಕ್ತ ದಾಖಲೆಗಳಿಲ್ಲದೇ ಹಣ, ಮದ್ಯ, ಚಿನ್ನಾಭರಣ ಹಾಗೂ ವಾಣಿಜ್ಯ ಸರಕುಗಳನ್ನು ಸಾಗಾಟ ಮಾಡಲಾಗುತ್ತಿರುವ ಬಗ್ಗೆ ಪರಿಶೀಲಿಸಿದರು. ಅಲ್ಲದೇ ಸ್ಥಳದಲ್ಲಿದ್ದ ಚೆಕ್‌ಪೋಸ್ಟ್ ಸಿಬ್ಬಂದಿಗಳಿಗೆ ಚುನಾವಣೆ ಅಕ್ರಮದಲ್ಲಿ ಯಾರೇ ಭಾಗಿಯಾದರೂ ಅಂತವರ ವಿರುದ್ಧ ಮುಲಾಜಿಲ್ಲದೇ ಚುನಾವಣೆ ನಿಯಮಾನುಸಾರ ಕ್ರಮಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.


Spread the love

LEAVE A REPLY

Please enter your comment!
Please enter your name here