ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೇವನಹಳ್ಳಿ ತಾಲ್ಲೂಕು ಹೆಗ್ಗನಹಳ್ಳಿ ಗ್ರಾಮದ ಬಳಿ ನಡೆದಿದೆ. ದೇವನಹಳ್ಳಿ ತಾಲ್ಲೂಕು ಬೋವಿ ಪಾಳ್ಯ ಗ್ರಾಮದ ಶ್ರೀನಿವಾಸ್ (32) ಕೊಲೆಯಾದ ವ್ಯಕ್ತಿಯಾಗಿದ್ದು,
Advertisement
ಬೋವಿಪಾಳ್ಯ ಗ್ರಾಮದ ಗೋವಿಂದರಾಜು, ಮನೋಜ್, ತಿಮ್ಮರಾಜು ಮತ್ತು ಮಂಜುನಾಥ್ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಮಚ್ಚು, ಚಾಕು & ಕಬ್ಬಿಣದ ರಾಡ್ ನಿಂದ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಗಣೇಶ ವಿಸರ್ಜನೆ ವೇಳೆಯಲ್ಲಿ ಇವರ ನಡುವೆ ವೈಮನಸ್ಸು ಉಂಟಾಗಿತ್ತು. ಆದ್ದರಿಂದ ನಾಲ್ವರು ಸ್ನೇಹಿತರು ಸೇರಿ ಬೋವಿಪಾಳ್ಯ ಹೊರವಲಯದ ಎಂಬಾಸಿ ಕಂಪನಿ ಜಾಗದಲ್ಲಿ ಚಾಕು, ಮಚ್ಚಿನಿಂದ ಚುಚ್ಚಿ ಬರ್ಬರವಾಗಿ ಕೊಲೆಮಾಡಿದ್ದಾರೆ. ನಂತರ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು, ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.