ವಿಜಯಪುರ:- ನಡುರಸ್ತೆಯಲ್ಲೇ ಓಮಿನಿ ಕಾರೊಂದು ಸುಟ್ಟುಕರಕಲಾದ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಬಳಿ ಜರುಗಿದೆ.
Advertisement
ಬಸಯ್ಯ ಹಿರೇಮಠ ಎಂಬವರಿಗೆ ಸೇರಿದ ಓಮಿನಿ ವಾಹನ ಸುಟ್ಟು ಭಸ್ಮವಾಗಿದ್ದು, ಇವರು ವಿಜಯಪುರ ಮೂಲದವರು ಎಂದು ತಿಳಿದು ಬಂದಿದೆ. ಉಕ್ಕಲಿ ಗ್ರಾಮದಿಂದ ಸಂಬಂಧಿಕರನ್ನು ಕರೆದುಕೊಂಡು ಎಡೆಯೂರುಗೆ ಹೊರಟ್ಟಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಾಹನದಲ್ಲಿದ್ದವರು ಕೆಳಗಿಳಿದಿದ್ದಾರೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬರುವ ಮೊದಲೆ ವಾಹನ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.