HomeGadag Newsಜೂನ್ 12ರಂದು ಧರ್ಮಸಭೆ, ಕೀರ್ತನ ಸಮ್ಮೇಳನ

ಜೂನ್ 12ರಂದು ಧರ್ಮಸಭೆ, ಕೀರ್ತನ ಸಮ್ಮೇಳನ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪರಮಪೂಜ್ಯ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ 81ನೇ ಹಾಗೂ ಪದ್ಮಭೂಷಣ ಲಿಂ. ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಸ್ಮರಣೋತ್ಸವ, ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ಜೂನ್ 12ರಂದು ಸಂಜೆ 6 ಗಂಟೆಗೆ ಧರ್ಮಸಭೆ ಹಾಗೂ ಕೀರ್ತನ ಸಮ್ಮೇಳನ ಜರುಗಲಿದೆ.

ಕಾರ್ಯಕ್ರಮದಲ್ಲಿ ಕಾಶಿ ಪೀಠದ ಪೂಜ್ಯಶ್ರೀ ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದಗಳವರು ಸಾನ್ನಿಧ್ಯ ವಹಿಸುವರು. ಸೂಡಿ ಜುಕ್ತಿಹಿರೇಮಠದ ಪೂಜ್ಯಶ್ರೀ ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಚಳಗೇರಿ ಹಿರೇಮಠದ ಪೂಜ್ಯಶ್ರೀ ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನೇತೃತ್ವ ವಹಿಸುವರು. ಎಮ್ಮಿಗನೂರ ಶ್ರೀ ಹಂಪಿ ಸಾವಿರ ದೇವರು ಮಹಾಮಹಂತರ ಸಂಸ್ಥಾನ ಗುರುಮಠದ ಪೂಜ್ಯಶ್ರೀ ವಾಮದೇವ ಮಹಾಂತ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಹೆಬ್ಬಾಳ ಸಂಸ್ಥಾನ ಬೃಹನ್ಮಠದ ಪೂಜ್ಯಶ್ರೀ ನಾಗಭೂಷಣ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು, ಶಿರಕೋಳ ಹಿರೇಮಠದ ಪೂಜ್ಯಶ್ರೀ ಗುರುಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಸುಳ್ಳ-ಹೂಲಿ ಪಂಚಗೃಹಮಠದ ಪೂಜ್ಯಶ್ರೀ ಶಿವಸಿದ್ದರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಅಡ್ನೂರ-ರಾಜೂರ ಬ್ರಹನ್ಮಠದ ಪೂಜ್ಯಶ್ರೀ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು, ನೆಗಳೂರು ಸಂಸ್ಥಾನ ಹಿರೇಮಠದ ಪೂಜ್ಯಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮೈನಳ್ಳಿ-ಬಿಕನಳ್ಳಿಯ ಪೂಜ್ಯಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಹುಬ್ಬಳ್ಳಿಯ ಆಯುರ್ವೇದಿಕ್ ಮಹಾಮನೆಯ ವೈದ್ಯಶ್ರೀ ಚೆನ್ನಬಸವಣ್ಣ ಗುರೂಜಿ, ಲಿಂಗಸೂರ ಮಾಣಿಕೇಶ್ವರಿ ಆಶ್ರಮದ ಪೂಜ್ಯಶ್ರೀ ಶಿವಶರಣೆ ನಂದೀಶ್ವರಿ ಅಮ್ಮನವರು, ಗದುಗಿನ ಅಡವಿಂದ್ರಸ್ವಾಮಿ ಮಠದ ಧರ್ಮದರ್ಶಿಗಳಾದ ಮಹೇಶ್ವರ ಸ್ವಾಮೀಜಿ ಹೊಸಳ್ಳಿಮಠ ಅವರುಗಳು ಸಮ್ಮುಖ ವಹಿಸುವರು.

ಪಂ.ರಾಜಗುರು ಗುರುಸ್ವಾಮಿ ಕಲಿಕೇರಿ ಹಿತನುಡಿಯುವವರು. ಶ್ರೀ ವೀರೇಶ್ವರ ಪುಣ್ಯಾಶ್ರಮ ಸೋಲ್‌ಟ್ರಸ್ಟ್ನ ಸದಸ್ಯ ಚಂದ್ರು ಬಾಳಿಹಳ್ಳೀಮಠ ಪ್ರಾಸ್ತಾವಿಕವಾಗಿ ಮಾತನಾಡುವರು. ವೀರೇಶ ಕೂಗು ಸ್ವಾಗತಿಸುವವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದ ಪಿ.ಸಿ. ಗದ್ದಿಗೌಡರ, ಶಾಸಕರಾದ ಡಾ. ಚಂದ್ರು ಲಮಾಣಿ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಬಾದಾಮಿಯ ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಶ್ರೀ ವೀರೇಶ್ವರ ಪುಣ್ಯಾಶ್ರಮ ಸೋಲ್‌ಟ್ರಸ್ಟ್ನ ಅಧ್ಯಕ್ಷ ನಿಂಗಪ್ಪ ಕೆಂಗಾರ, ಕರ್ನಾಟಕ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ನಿವೃತ್ತ ಶಿಕ್ಷಕ ಡಾ. ಸಂಗಮೇಶ ಕೊಳ್ಳಿ, ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಕಾರ್ಯದರ್ಶಿ ಅಶೋಕಗೌಡ ಪಾಟೀಲ, ವಸಂತಗೌಡ ಪೊಲೀಸ್‌ಪಾಟೀಲ, ವರ್ತಕರಾದ ಸದಾಶಿವಯ್ಯ ಮದರಿಮಠ, ರಾಜು ಗುಡಿಮನಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಗಣ್ಯ ವರ್ತಕರಾದ ಕಿರಣ ಭೂಮಾ, ಅನಿಲ ಅಬ್ಬಿಗೇರಿ, ಪ್ರಶಾಂತ ಶಾಬಾದಿಮಠ, ಮಹೇಶ ಶಾಬಾದಿಮಠ, ವಿಜಯಕುಮಾರ ಹಿರೇಮಠ, ರುದ್ರಯ್ಯಸ್ವಾಮಿ ಹಿರೇಮಠ, ಶಿರುಗುಪ್ಪದ ಜಂಬನಗೌಡ್ರ, ಬಾಗಲಕೋಟೆಯ ರಾಜಣ್ಣ ಹಂಗರಗಿ, ಗದುಗಿನ ವಿ.ಎಸ್. ಮಾಳೆಕೊಪ್ಪಮಠ, ಪಿ.ಸಿ. ಹಿರೇಮಠ, ಡಾ. ಸಿದ್ರಾಮಯ್ಯ ನಿಂಗಯ್ಯಮಠ, ಎಂ.ಆರ್. ಹಿರೇಮಠ, ಅಂಬರೀಶ ಹಿರೇಮಠ, ವಸಂತ ಮೇಟಿ ಮುಂತಾದವರು ಭಾಗವಹಿಸುವರು.

ರಾತ್ರಿ 10.30ಕ್ಕೆ ಗಾನಯೋಗಿ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ವಿರಚಿತ `ಸೊನ್ನಲಗಿ ಶ್ರೀ ಸಿದ್ದರಾಮೇಶ್ವರ’ ನಾಟಕ ಪ್ರದರ್ಶನಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಅಡ್ನೂರ-ರಾಜೂರ ಬ್ರಹನ್ಮಠದ ಪೂಜ್ಯಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು, ಪೂಜ್ಯಶ್ರೀ ಕಲ್ಲಯ್ಯಜ್ಜನವರು ಸಾನ್ನಿಧ್ಯ ವಹಿಸುವರು. ಶಿವಸಂಗಮ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಜಿ.ಎಂ. ಪಲ್ಲೇದ ಅಧ್ಯಕ್ಷತೆ ವಹಿಸುವವರು. ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ನಿವೃತ್ತ ಅಧಿಕಾರಿ ಪರಶುರಾಮ ಕಟ್ಟಿಮನಿ ಕಾರ್ಯಕ್ರಮ ಉದ್ಘಾಟಿಸುವವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಹಾಗೂ ಜೋಹರಾ ಪೀರಸಾಬ ಕೌತಾಳ ಉಪಸ್ಥಿತರಿರುವರು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ರಂಗನಾಥ್ ಅಂಬಿಗೇರ ಅವರ ಸಾಹಿತ್ಯದ `ಪುಟ್ಟರಾಜ ಋಣಭಾರ’ ದ್ವನಿಸುರುಳಿ ಹಾಗೂ ಜಲ್ಲಾಪುರದ ಗುರು ಮಹಾಂತಯ್ಯ ಶಾಸ್ತಿç ಆರಾಧ್ಯಮಠ ಅವರು ರಚಿಸಿದ `ಗೀತ ಮಂದಾರ’ ಗ್ರಂಥ ಬಿಡುಗಡೆಗೊಳ್ಳಲಿದೆ. ಇದಕ್ಕೂ ಮುನ್ನ ಬೆಳಗ್ಗೆ 11 ಗಂಟೆಗೆ ಸನ್ಮಾನ ಕಾರ್ಯಕ್ರಮ ಜರುಗುವುದು. ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಅಡ್ನೂರ ರಾಜೂರು ಬ್ರಹನ್ಮಠದ ಪೂಜ್ಯಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸುವರು. ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪೂಜ್ಯಶ್ರೀ ಡಾ. ಕಲ್ಲಯ್ಯಜ್ಜನವರು ಅಧ್ಯಕ್ಷತೆ ವಹಿಸುವವರು. ಮೈಂದರಗಿಯ ಸಂಗಯ್ಯ ಶಾಸ್ತ್ರಿಗಳು ಹಿರೇಮಠ, ಮಲ್ಲಾಪುರದ ಭೀಮಣ್ಣ ಉಗಲಾಟ, ಬೆಳವಣಿಕೆಯ ಬಸವಗೌಡ್ರ ಪಾಟೀಲ, ಗದುಗಿನ ಬಸವಗೌಡ್ರ ದ್ಯಾಮಗೌಡ ಅವರನ್ನು ಸನ್ಮಾನಿಸಲಾಗುವುದು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!