ಒಬ್ಬರ ವ್ಯಕ್ತಿತ್ವ ಕೊಲೆ ಮಾಡಬಾರದು, ಇದು ಶೋಭೆ ತರಲ್ಲ: ಖಾತೆ ಬದಲಾವಣೆ ವದಂತಿಗೆ ಜಿ. ಪರಮೇಶ್ವರ್ ರಿಯಾಕ್ಟ್!

0
Spread the love

ಬೆಂಗಳೂರು:- ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಳಿಕ ಸಿಎಂ ಬಳಿ ಖಾತೆ ಬದಲಾವಣೆ ಬಗ್ಗೆ ಜಿ. ಪರಮೇಶ್ವರ್ ಬೇಡಿಕೆ ಇಟ್ಟಿದ್ದಾರೆ ಎಂಬ ವದಂತಿ ವಿಚಾರವಾಗಿ ಇದೀಗ ಗೃಹ ಸಚಿವರು ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇದು ಸತ್ಯಕ್ಕೆ ದೂರವಾದದ್ದು, ಇದು ಸುಳ್ಳು ಎಂದಿದ್ದಾರೆ. ಖಾತೆ ಬದಲಾವಣೆಯ ಬಗ್ಗೆ ನಾನು ಸಿಎಂ ಬಳಿ ಹೇಳಿಕೊಂಡಿಲ್ಲ. ಖಾತೆ ಬದಲಾವಣೆಗೆ ಕೇಳಿದ್ದೇನೆ ಅನ್ನೋ ವಿಚಾರವನ್ನು ಹೇಳಿದ್ಯಾರು? ಏನೇ ಇದ್ದರೂ ನನ್ನನ್ನೇ ಕೇಳಬೇಕು ಅಲ್ಲವೇ. ನಾನು ಸಂಯಮದಿಂದಲೇ ನಡೆದುಕೊಂಡಿದ್ದೇನೆ. ಒಬ್ಬರ ವ್ಯಕ್ತಿತ್ವ ಕೊಲೆ ಮಾಡಬಾರದು, ಇದು ಶೋಭೆ ತರುವುದಿಲ್ಲ. ಏನೇ ಇದ್ದರೂ ನನ್ನನ್ನೇ ಕೇಳಿ, ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.

ನನ್ನ ಪತ್ನಿ ಬಳಿಯೂ ರಾಜಕೀಯ ವಿಚಾರದ ಬಗ್ಗೆ ಮಾತನಾಡಲ್ಲ. ಖಾತೆ ಬದಲಾಯಿಸಿ ಅಂತಾ ಸಿಎಂ ಬಳಿ ಹೇಳಿದ್ದಾರೆ ಎಂದಿದ್ಯಾರು? ಇಂತಹ ಖಾತೆಯೇ ಬೇಕು ಎಂದು ನಾನು ಯಾವತ್ತೂ ಕೇಳಿಲ್ಲ. ಬೆಂಗಳೂರು ಘಟನೆಯಿಂದ ನಾವು ನೋವು ಅನುಭವಿಸುತ್ತಿದ್ದೇವೆ. ಇದು ಸವಾಲು, ಇದನ್ನು ಎದುರಿಸಬೇಕು ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here