ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲೆಯಲ್ಲಿ ಸರ್ಕಾರದ ಪಂಚ ಗ್ಯಾರಂಟಿಗಳ ಪ್ರಗತಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕಳೆದ ಒಂದು ವರ್ಷದ ಸಾಧನೆಯನ್ನು ಬಿಂಬಿಸುವ `ವರ್ಷ ಒಂದು ಸಾಧನೆ ನೂರಾರು’ ಎಂಬ ಕಿತ್ತು ಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಲೋಕಾರ್ಪಣೆಗೊಳಿಸಿದರು.
ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜರುಗಿದ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಾರ್ವಜನಿಕ ಧ್ವಜಾರೋಹಣ ನಂತರ ಸಚಿವರು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ಬಿಂಬಿಸುವ ‘ಕಲ್ಪನೆ, ಯೋಜನೆ, ಸಾಕಾರ’ ಎಂಬ ಅಡಿಬರಹದ ವರ್ಷ ಒಂದು ಸಾಧನೆ ನೂರಾರು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ, ವಾರ್ತಾಧಿಕಾರಿ ವಸಂತ ಮಡ್ಲೂರ ಉಪಸ್ಥಿತರಿದ್ದರು.