ಬೆಂಗಳೂರು: ಅಕ್ರಮ ಆನ್ಲೈನ್ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ತಿಂಗಳಿನಿಂದ ಜೈಲಿನಲ್ಲಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜಾರಿ ನಿರ್ದೇಶನಾಲಯ ಬಂಧಿಸಿದ್ದ ಪಪ್ಪಿ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಇಂದು ಷರತ್ತುಬದ್ಧವಾಗಿ ಬಿಡುಗಡೆಗೆ ಆದೇಶ ನೀಡಿದೆ. ಇಡಿ ತನಿಖೆಯ ವೇಳೆ ಪಪ್ಪಿ ಅವರ 9 ಬ್ಯಾಂಕ್ ಖಾತೆಗಳಲ್ಲಿ ಸುಮಾರು 40.69 ಕೋಟಿ ರೂ. ನಗದು ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಅಂದಾಜು 14.46 ಕೋಟಿ ರೂ. ಸೇರಿದಂತೆ ಒಟ್ಟು 55 ಕೋಟಿ ರೂ. ಹಣವನ್ನು ಫ್ರೀಜ್ ಮಾಡಲಾಗಿದೆ.
ಜೊತೆಗೆ ಐದು ಐಷಾರಾಮಿ ಕಾರುಗಳನ್ನೂ ಸೀಜ್ ಮಾಡಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿತ್ತು.



