ಬೀದರ್: ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಜ್ಯೋತಿ ತಾಂಡದಲ್ಲಿ ನಡೆದಿದೆ. ವಿಜಯ್‌ಕುಮಾರ್ ಜಗನ್ನಾಥ ಹೊಳ್ಳೆ (25) ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ಮಧ್ಯ ನರಳಾಡುತ್ತಿರುವ ಯುವಕ ಯಾಗಿದ್ದು, ಮೂಲತಃ ಹುಲಸೂರು ತಾಲೂಕಿನ ಬೇಲೂರು ಗ್ರಾಮದ ಯುವಕನಾಗಿದ್ದು,
Advertisement
ಬಿ. ಫಾರ್ಮಾ ಪದವೀಧರನಾಗಿರುವ ಯುವಕ ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ಸಾಲ ಮಾಡಿ ಹಣ ಕಳೆದುಕೊಂಡಿದ್ದನು. ಈಗಾಗಲೇ ಕುಟುಂಬಸ್ಥರು 10 ಲಕ್ಷ ಸಾಲ ತೀರಿಸಿದ್ದರು. ಆದ್ರೆ ಮತ್ತೆ ಎರಡು ಲಕ್ಷ ಸಾಲ ಮಾಡಿಕೊಂಡಿದ್ದ ವಿಜಯಕುಮಾರ್,
ಸಾಲದ ವಿಷಯ ಮನೆಯಲ್ಲಿ ಗೊತ್ತಾದ್ರೆ ತೊಂದರೆ ಆಗುತ್ತೆ ಅಂತಾ ಅತ್ಮಹತ್ಯೆಗೆ ಯತ್ನಸಿದ್ದಾನೆ. ದೇಹದ ಬಹುತೇಕ ಭಾಗ ಸುಟ್ಟು ಹೋಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮೇಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.