ಬೆಂಗಳೂರು:- ನಾಳೆ ರಾಜ್ಯಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಬಂದ್ ಆಗಲಿದೆ.
ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಶನಿವಾರ ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತಗೊಳ್ಳಲಿದೆ.
ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನಿಂದ ಬಂದ್‌ಗೆ ಕರೆ ನೀಡಲಾಗಿದ್ದು, ದೇಶಾದ್ಯಂತ ಪ್ರತಿಭಟನೆ ನಡೆಯಲಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ರಾಜ್ಯ ಘಟಕ ಬಂದ್‌ಗೆ ಬೆಂಬಲ ನೀಡಿದ್ದು, ಅಸೋಸಿಯೇಶನ್ ರಾಜ್ಯಾಧ್ಯಕ್ಷ ಶ್ರೀನಿವಾಸ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.
ಈ ಕುರಿತು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಶ್ರೀನಿವಾಸ್ ಮಾತನಾಡಿ, ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ ಆರು ಗಂಟೆಯವರೆಗೂ ಓಪಿಡಿ ಸೇವೆ ಇರೋದಿಲ್ಲ. 24 ಗಂಟೆಗಳ ಕಾಲ ಹೊರ ರೋಗಿಗಳ ವಿಭಾಗ ಬಂದ್ ಆಗಲಿದೆ. ಎಮರ್ಜೆನ್ಸಿ ಪೇಷೆಂಟ್‌ಗಳಿಗೆ ಮಾತ್ರ ಟ್ರೀಟ್‌ಮೆಂಟ್ ಇರುತ್ತದೆ ಎಂದು ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ ಆರು ಗಂಟೆಯಿಂದ ಭಾನುವಾರ ಬೆಳಗ್ಗೆ ಆರು ಗಂಟೆಯವರೆಗೂ ಪ್ರತಿಭಟನೆ ಮಾಡುತ್ತಿದ್ದೇವೆ. ಎಮರ್ಜೆನ್ಸಿ ರೋಗಿಗಳಿಗೆ ಯಾವುದೇ ತೊಂದರೆ ಆಗಲ್ಲ. ಓಪಿಡಿ ಸೇವೆ ಮಾತ್ರ ಬಂದ್ ಮಾಡುತ್ತಿದ್ದೇವೆ. ಒಬ್ಬ ಹೆಣ್ಣು ಮಗಳ ಮೇಲೆ ಅತ್ಯಾಚಾರ ಆಗಿದೆ. ರಾತ್ರಿ ಡ್ಯುಟಿ ವೇಳೆ ಈ ಥರ ಆಗುತ್ತಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನಲ್ಲಿ 30 ಸಾವಿರ ಮಂದಿ ಇದ್ದಾರೆ. ಒಂದೂವರೆ ಲಕ್ಷ ವೈದ್ಯರು ಇದ್ದಾರೆ. ಎಲ್ಲರಿಗೂ ರಿಕ್ವೆಸ್ಟ್ ಮಾಡಿಕೊಂಡಿದ್ದೇವೆ. ಫನಾ, ಪೀಡಿಯಾಟ್ರಿಕ್ ಅಸೋಸಿಯೇಶನ್ ಕೂಡ ಸೇರುತ್ತಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕಚೇರಿ ಬಳಿ ಎಲ್ಲಾ ಸೇರಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.