ಬೆಂಗಳೂರು: ಆಪರೇಷನ್ ಕಮಲ ವಿಚಾರವಾಗಿ ಸಿದ್ದರಾಮಯ್ಯ ಮಾಡಿರುವ ಆರೋಪ ಸತ್ಯನೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲ ವಿಚಾರವಾಗಿ ಸಿದ್ದರಾಮಯ್ಯ ಮಾಡಿರುವ ಆರೋಪ ಸತ್ಯನೇ ಆಗಿದೆ. ನೇರವಾಗಿ ಹಾಗೂ ಪರೋಕ್ಷವಾಗಿ 18 ತಿಂಗಳಿನಿಂದ ಇಂತಹ ಪ್ರಯತ್ನ ಮಾಡ್ತಾರೆ ಇದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಎಲ್ಲವೂ ಸಾಧ್ಯ. ಸರ್ಕಾರ ಅಸ್ಥಿರ ಗೊಳಿಸುವುದೇ ಅವರ ಕೆಲಸವಾಗಿದೆ. ಇದರ ಬಗ್ಗೆ ಖಚಿತ ಮಾಹಿತಿ ಇದೆ. ಅವರು ಪ್ರಯತ್ನ ಮಾಡ್ತಾನೇ ಇದ್ದಾರೆ ಎಂದು ಹೇಳಿದರು. ಇನ್ನೂ ಸಂಡೂರು ಬೈ ಎಲೆಕ್ಷನ್ ವಿಚಾರವಾಗಿ ಮಾತನಾಡಿದ ಅವರು, ಚುನಾವಣೆ ಚೆನ್ನಾಗಿ ಆಗಿದೆ. ಜನ ಕಾಂಗ್ರೆಸ್ ಪಕ್ಷಕ್ಕೆ ಆರ್ಶೀವಾದ ಮಾಡ್ತಾರೆ ಎಂಬ ಭರವಸೆ ಇದೆ ಎಂದರು.



