ಹ್ಯಾಟ್ರಿಕ್ ಹೀರೋ ಶಿವಣ್ಣನಿಗೆ ಆಪರೇಷನ್ ಸಕ್ಸಸ್! ಶಸ್ತ್ರಚಿಕಿತ್ಸೆಗೆ ವೈದ್ಯರು ತೆಗೆದುಕೊಂಡ ಸಮಯ ಎಷ್ಟು?

0
Spread the love

ಅನಾರೋಗ್ಯದ ಹಿನ್ನೆಲೆ ಅಮೇರಿಕಾದಲ್ಲಿ ಸೂಕ್ತ ಚಿಕಿತ್ಸೆಗೆ ದಾಖಲಾಗಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

Advertisement

ಶಿವರಾಜ್‌ಕುಮಾರ್‌ಗೆ ಅಮೆರಿಕದ ಫ್ಲೋರಿಡಾದ ಮಿಯಾಮಿ ಕ್ಯಾನ್ಸರ್ ಇನ್ಸಿಟ್ಯೂಟ್‌ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸುಮಾರು 6 ಗಂಟೆಗಳ ಕಾಲ ತಜ್ಞ ವೈದ್ಯರು ಶಿವಣ್ಣನಿಗೆ ಆಪರೇಷನ್ ಮಾಡಿದ್ದಾರೆ.

ವೈದ್ಯ ಡಾ. ಮುರುಗೇಶ್ ನೇತೃತ್ವದಲ್ಲಿ ಮಿಯಾಮಿ ಆಸ್ಪತ್ರೆಯಲ್ಲಿ ಶಿವಣ್ಣನಿಗೆ ಆಪರೇಷನ್ ಮಾಡಲಾಗಿದೆ. ಭಾರತೀಯ ಕಾಲಮಾನ ಮಂಗಳವಾರ ರಾತ್ರಿ 11:30ರ ಸುಮಾರಿಗೆ ಶಸ್ತ್ರಚಿಕಿತ್ಸೆ ಮುಗಿದಿದೆ. ಅಮೆರಿಕದ ಕಾಲಮಾನ ಬೆಳಗ್ಗೆ 8 ಗಂಟೆಗೆ ಅಂದರೆ ಭಾರತೀಯ ಕಾಲಮಾನದ ಪ್ರಕಾರ 6 ಗಂಟೆಗೆ ಆಪರೇಷನ್ ಥಿಯೇಟರ್‌ಗೆ ಶಿವಣ್ಣರನ್ನು ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಸುಮಾರು 6 ಗಂಟೆಗಳ ಕಾಲ ಸರ್ಜರಿ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಶಿವಣ್ಣನೊಂದಿಗೆ ಪತ್ನಿ ಗೀತಾ, ಪುತ್ರಿ ನಿವೇದಿತಾ, ಬಾಮೈದ ಮಧು ಬಂಗಾರಪ್ಪ ಜೊತೆಗಿದ್ದಾರೆ.

ಇನ್ನು ಕ್ಯಾನ್ಸರ್ ಚಿಕಿತ್ಸೆಗೊಳಾಗಿರುವ ಶಿವಣ್ಣನಿಗೆ ಆಸ್ಪತ್ರೆಯಲ್ಲೇ ಇನ್ನೊಂದು ವಾರ ಚಿಕಿತ್ಸೆ ಮುಂದುವರೆಯಲಿದೆ. ನುರಿತ ವೈದ್ಯರ ನಿಗಾದಲ್ಲಿ ಶಿವಣ್ಣ ಇರಲಿದ್ದಾರೆ. ಬಳಿಕ ಮನೆಗೆ ಶಿಫ್ಟ್ ಆಗಲಿದ್ದಾರೆ.


Spread the love

LEAVE A REPLY

Please enter your comment!
Please enter your name here