HomeKarnataka Newsಶಿವನಸಮುದ್ರ ನಾಲೆಯಿಂದ ಕಾಡಾನೆ ಮೇಲೆತ್ತುವ ಆಪರೇಷನ್ ಸಕ್ಸಸ್!

ಶಿವನಸಮುದ್ರ ನಾಲೆಯಿಂದ ಕಾಡಾನೆ ಮೇಲೆತ್ತುವ ಆಪರೇಷನ್ ಸಕ್ಸಸ್!

For Dai;y Updates Join Our whatsapp Group

Spread the love

ಮಂಡ್ಯ: ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿ ನಾಲೆಗೆ ಬಿದ್ದಿದ್ದ ಆನೆಯನ್ನು ಮೇಲೆತ್ತುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಶಿವನಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಕಳೆದ ಎರಡು ದಿನಗಳಿಂದ ಆನೆ ಓಡಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿತ್ತು.

ಶನಿವಾರ (ನ.15) ರಾತ್ರಿ, ವಿದ್ಯುತ್ ಘಟಕಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಲೆಗೆ ಇಳಿದಿದೆ. ಆದರೆ ಆ ಸಮಯದಲ್ಲಿ ನೀರಿನ ಹರಿವಿನ ರಭಸ ಹೆಚ್ಚು ಇದ್ದುದರಿಂದ ಆನೆ ಮತ್ತೆ ಮೇಲೆ ಏರಲು ಸಾಧ್ಯವಾಗಲಿಲ್ಲ.

ಭಾನುವಾರ ಆನೆ ಕಾಣದಿರುವುದನ್ನು ಗಮನಿಸಿದ ಅಧಿಕಾರಿಗಳಿಗೆ ಆನೆ ನಾಲೆಗೆ ಇಳಿದಿರುವ ವಿಷಯ ಗೊತ್ತಾಗಿದೆ. ಬಳಿಕ ಸಂಜೆವರೆಗೆ ಆನೆ ಮೇಲೆ ಬರುತ್ತದೆ ಎಂದು ಕಾದು ನೋಡಿದರೂ ಕೂಡ ಆನೆ ಮೇಲೆ ಬಂದಿಲ್ಲ. ಹೀಗಾಗಿ ಡಿಸಿಎಫ್ ರಘು ಹಾಗೂ ವನ್ಯಜೀವಿ ವಲಯ ಮೈಸೂರು ವಿಭಾಗ ಡಿಸಿಎಫ್ ಪ್ರಭು ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು ನಾಲೆಯ ನೀರಿನ ಪ್ರಮಾಣವನ್ನು ತಗ್ಗಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.

ಆರಂಭದಲ್ಲಿ ಅಧಿಕಾರಿಗಳು ಆನೆಗೆ ಆಹಾರ ನೀಡಿ, ಗನ್‌ನಲ್ಲಿ ಶೂಟ್ ಮಾಡುವ ಮೂಲಕ ಅರವಳಿಕೆ ಮದ್ದು ನೀಡಿದ್ದರು. ಆನೆ ಪ್ರಜ್ಞೆ ತಪ್ಪಿದ ಬಳಿಕ ಹೈಡ್ರಾಲಿಕ್‌ ಕ್ರೇನ್‌ ಮೂಲಕ ಹಗ್ಗವನ್ನು ಕಟ್ಟಿ ಕಂಟೇನರ್‌ ಮೇಲೆ ಇಟ್ಟು ಆನೆಯನ್ನು ಮೇಲಕ್ಕೆ ಎತ್ತಲಾಗಿದೆ. ಮೇಲೆ ಬಂದ ಆನೆಯನ್ನು ಲಾರಿ ಮೂಲಕ ಬೇರೆ ಕಡೆಗೆ ಶಿಫ್ಟ್‌ ಮಾಡಲಾಯಿತು.
4 ದಿನಗಳಿಂದ ನೀರಿನೊಳಗೆಯೇ ಇದ್ದ ಕಾಡಾನೆ ಕಾಲಿಗೆ ಫಂಗಸ್ ಆಗಿರುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಅಲ್ಲದೇ ಸರಿಯಾಗಿ ಆಹಾರವಿಲ್ಲದೆ ಕಾಲುವೆಯಲ್ಲಿ ಆನೆ ಒದ್ದಾಡಿತ್ತು. ಹೀಗಾಗಿ ಆನೆಯ ಆರೋಗ್ಯ ತಪಾಸಣೆ ನಡೆಸಿದ ಬಳಿಕ ವೈದ್ಯರು ಕೆಲ ಚಿಕಿತ್ಸೆ ನೀಡಲಿದ್ದಾರೆ.

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!