HomeKarnataka Newsಆಪರೇಷನ್ ವೈಲ್ಡ್‌ ಲೈಫ್! 144 ಸೆಕ್ಷನ್ ಜಾರಿ ಮಾಡಿ ಸೆರೆ ಕಾರ್ಯಾಚರಣೆ ನಡೆಸಲು ಸಚಿವ ಖಂಡ್ರೆ...

ಆಪರೇಷನ್ ವೈಲ್ಡ್‌ ಲೈಫ್! 144 ಸೆಕ್ಷನ್ ಜಾರಿ ಮಾಡಿ ಸೆರೆ ಕಾರ್ಯಾಚರಣೆ ನಡೆಸಲು ಸಚಿವ ಖಂಡ್ರೆ ಸೂಚನೆ

For Dai;y Updates Join Our whatsapp Group

Spread the love

ಚಿಕ್ಕಮಗಳೂರು: ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಮಾಹಿತಿ ಕಮಾಂಡ್ ಸೆಂಟರ್‌ಗೆ ಬಂದ ತಕ್ಷಣವೇ ತೋಟದ ಬೆಳೆಗಾರರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿ ಬಳಿಯ ತೋಟದಲ್ಲಿ ಕಳೆದ ಏಳು ದಿನಗಳ ಅಂತರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಸಚಿವರು ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದರು.

ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಿರುವ ಪ್ರದೇಶಗಳಲ್ಲಿ ಸ್ಥಳೀಯ ಮುಖಂಡರು, ಗ್ರಾಮಗಳ ಜಮೀನು ಮಾಲೀಕರನ್ನು ಒಳಗೊಂಡ ವಾಟ್ಸಪ್ ಗುಂಪು ರಚಿಸಿ ತಕ್ಷಣ ಮಾಹಿತಿ ಹಂಚುವಂತೆ ನಿರ್ದೇಶನ ನೀಡಿದರು.

144 ಜಾರಿ ಮಾಡಿ ಕಾರ್ಯಾಚರಣೆ

“ಮಾನವ ಜೀವ ಅತ್ಯಮೂಲ್ಯ. ಒಂದು ಜೀವ ಹಾನಿಯಾದ ಬಳಿಕ ಮತ್ತೊಂದು ಸಾವು ಸಂಭವಿಸಿರುವುದು ದುಃಖದ ಸಂಗತಿ. ಇಂತಹ ಘಟನೆ ಮರುಕಳಿಸದಂತೆ 24×7 ನಿಗಾವಹಿಸಬೇಕು” ಎಂದು ಸಚಿವರು ತಿಳಿಸಿದರು. ಕಡ್ಡಾಯವಾಗಿ ಸೆಕ್ಷನ್ 144 ಜಾರಿ ಮಾಡಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಬೇಕು. ಥರ್ಮಲ್ ಡ್ರೋನ್ ಸೇರಿದಂತೆ ಅತ್ಯಾಧುನಿಕ ಸಾಧನಗಳನ್ನು ಬಳಕೆ ಮಾಡಬೇಕು ಎಂದು ಸೂಚಿಸಿದರು.

ಕಳೆದ ವಾರ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟ ಬಳಿಕ ಆನೆ ಸೆರೆಗೆ ಕ್ರಮ ಕೈಗೊಳ್ಳಲಾಗಿತ್ತು. ಸ್ಥಳೀಯರಿಗೆ ತೋಟಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದ್ದರೂ, ಸೂಚನೆ ಉಲ್ಲಂಘಿಸಿ ತೋಟಕ್ಕೆ ಹೋದ ಕಾರಣ ಈ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆ ಮುನ್ನೆಚ್ಚರಿಕೆ ನೀಡಿದ ಬಳಿಕವೂ ತೋಟದ ಮಾಲೀಕರು ಕಾರ್ಮಿಕರನ್ನು ಕೆಲಸಕ್ಕೆ ಕಳುಹಿಸಿದರೆ ಅಂತಹ ಮಾಲೀಕರಿಗೆ ಎಚ್ಚರಿಕೆ ನೀಡಬೇಕು. ನಿರ್ಲಕ್ಷ್ಯ ತೋರಿದರೆ ದೂರು ದಾಖಲಿಸಲು ಸೂಚನೆ ನೀಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರಣ್ಯದ ಹೊರಭಾಗದಲ್ಲಿ 35 ಆನೆಗಳು ಮೂರು ಗುಂಪುಗಳಲ್ಲಿ ಸಂಚರಿಸುತ್ತಿವೆ. ಬೇಸಿಗೆ ಕಾಲದಲ್ಲಿ ಕಾಡಿನಿಂದ ಹೊರಬರುವುದು ಸಾಮಾನ್ಯವಾದರೂ, ವನ್ಯಜೀವಿ-ಮಾನವ ಸಂಘರ್ಷ ತಪ್ಪಿಸಲು ಸಿಬ್ಬಂದಿ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಸಚಿವರು ಸೂಚಿಸಿದರು.

ಪ್ರತಿ ವರ್ಷ ವನ್ಯಜೀವಿ ದಾಳಿಯಲ್ಲಿ ಸಂಭವಿಸುವ ಸಾವಿನ ಸಂಖ್ಯೆ ಇಳಿಕೆಯಾಗಬೇಕೇ ಹೊರತು ಹೆಚ್ಚಳವಾಗಬಾರದು. ಈ ದಿಶೆಯಲ್ಲಿ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!