ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅವಕಾಶ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ವಿಡಿಯೋ ಸಂವಾದದ ಮೂಲಕ ಸಭೆಯನ್ನು ಜರುಗಿಸಲಾಯಿತು.

Advertisement

ಸಭೆಯಲ್ಲಿ ಈಗಾಗಲೇ ನೇಮಕಾತಿ ಹೊಂದಿದ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ನಮೂನೆ‑18ರ ಅರ್ಜಿ ಫಾರ್ಮ್‌ಗಳು ಲಭ್ಯವಿದ್ದು, ಸದರಿ ಅರ್ಜಿಗಳನ್ನು ಅರ್ಹ ಎಲ್ಲ ಪದವೀಧರರು ಪಡೆದು, ಅದರೊಂದಿಗೆ ಸರಿಯಾದ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನಿರ್ದೇಶಿಸಲಾಗಿದೆ.

ಹೊಸ ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಪಟ್ಟಂತೆ ಶಾಸಕರು/ ಉಪವಿಭಾಗಾಧಿಕಾರಿಗಳು/ ತಹಸೀಲ್ದಾರರ ಕಚೇರಿಗಳಲ್ಲಿ ಸಹಾಯವಾಣಿ ಅಥವಾ ಸಹಾಯಕೇಂದ್ರ ಸ್ಥಾಪಿಸಲು ನಿರ್ದೇಶಿಸಿದ್ದಾರೆ.

ಸದರಿ ಸಭೆಯಲ್ಲಿ ಮುಖ್ಯ ಚುನಾವಣಾಧಿಕಾರಿಗಳು ನೀಡಿದ ನಿರ್ದೇಶನದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿಗಳು/ಜಿಲ್ಲಾಧಿಕಾರಿಗಳು—ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಇವರಿಗೆ—ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೆ.ಎಂ. ಜಾನಕಿ ಸೂಚನೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here