ಡೀಸೆಲ್ ದರ ಏರಿಕೆಗೆ ವಿರೋಧ: ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ- ನಾಳೆ ಈ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ?

0
Spread the love

ಬೆಂಗಳೂರು:- ಇತ್ತೀಚೆಗೆ ಡೀಸೆಲ್ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಲಾರಿ ಮಾಲೀಕರ ಸಂಘ, ಇಂದು ಮಧ್ಯರಾತ್ರಿಯಿಂದ ಮುಷ್ಕರಕ್ಕೆ ಕರೆ ಕೊಟ್ಟಿದೆ.

Advertisement

ಇದರಿಂದ ರಾಜ್ಯಾದ್ಯಂತ 6 ಲಕ್ಷ ಲಾರಿಗಳ ಸಂಚಾರ ಬಂದ್‌ ಆಗಲಿದ್ದು, ರಾಜ್ಯಕ್ಕೆ ಬರುವ ಮತ್ತು ಹೊರರಾಜ್ಯಗಳಿಗೆ ತೆರಳುವ ಸರಕು ಸಾಗಣೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯಿದೆ. 6 ತಿಂಗಳಲ್ಲಿ ಸರ್ಕಾರ 2ಬಾರಿ ಡಿಸೇಲ್ ದರ ಹೆಚ್ಚಿಸಿದೆ. ಡೀಸೆಲ್ ದರ ಇಳಿಸಬೇಕು ಹಾಗೂ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಲಾರಿ ಮಾಲೀಕರು ಏಪ್ರಿಲ್ 14ರ ಗಡುವು ಕೊಟ್ಟಿದ್ರು. ಆದರೆ, ಸರ್ಕಾರ ಇದಕ್ಕೆ ಸ್ಪಂದಿಸಿಲ್ಲ. ಹೀಗಾಗಿ ಇಂದು ಮಧ್ಯರಾತ್ರಿಯಿಂದಲೆ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಮುಂದಾಗಿದೆ. ಪರಿಣಾಮವಾಗಿ ಮಂಗಳವಾರದಿಂದ ಅನೇಕ ಸೇವೆಗಳಲ್ಲಿ ವ್ಯತ್ಯಯ ಆಗಲಿದೆ.

ಲಾರಿ ಮುಷ್ಕರದ ಕಾರಣ 6 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದೆ. ಜಲ್ಲಿ ಕಲ್ಲು, ಮರಳು ಲಾರಿಗಳು, ಗೂಡ್ಸ್ ವಾಹನಗಳು, ಅಕ್ಕಿ ಸಾಗಿಸುವ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದೆ. ಜತೆಗೆ, ಪೆಟ್ರೋಲ್, ಡೀಸೆಲ್ ಸಾಗಿಸುವ ಲಾರಿಗಳೂ ಬಂದ್ ಆಚರಿಸಲಿವೆ. ಬೇರೆ ರಾಜ್ಯಗಳ ಲಾರಿಗಳಿಗೂ ಪ್ರವೇಶವಿಲ್ಲ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here