HomeGadag Newsವಿದ್ಯುತ್ ದರ ಹೆಚ್ಚಳಕ್ಕೆ ವಿರೋಧ

ವಿದ್ಯುತ್ ದರ ಹೆಚ್ಚಳಕ್ಕೆ ವಿರೋಧ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯುತ್ ಕಾರ್ಮಿಕರ ಪಿಂಚಣಿ ಮತ್ತು ಗ್ರಾಚ್ಯುಟಿಯನ್ನು ಸರಿದೂಗಿಸಲು ವಿದ್ಯುತ್ ದರಗಳನ್ನು ಹೆಚ್ಚಿಸುವ ಸರ್ಕಾರದ ತೀರ್ಮಾನವನ್ನು ನರಸಾಪುರ ಇಂಡಸ್ಟ್ರಿಯಲ್ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ ಪಾಟೀಲ ವಿರೋಧಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನರಸಾಪುರ ಇಂಡಸ್ಟಿçಯಲ್ ಅಸೋಸಿಯೇಷನ್ ಪ್ರದೇಶದಲ್ಲಿ ಹೆಚ್ಚು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳೇ ಇದ್ದು, ಈಗಾಗಲೇ ಕೋವಿಡ್-19ರಿಂದ ನಲುಗಿರುವ ಕೈಗಾರಿಕೆಗಳಿಗೆ ವಿದ್ಯುತ್ ದರ ಹೆಚ್ಚಳವು ಬಿಸಿತುಪ್ಪವಾಗಿ ಪರಿಣಮಿಸಲಿದೆ. ಇದರಿಂದ ಕೈಗಾರಿಕೋದ್ಯಮಿಗಳು ಸಂಕಷ್ಟಕ್ಕೆ ಸಿಲುಕುವಂತಾಗುತ್ತದೆ. ದುಬಾರಿ ವಿದ್ಯುತ್ ಬಿಲ್ಲನ್ನು ಪಾವತಿಸುವ ಶಕ್ತಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಇಲ್ಲ. ಈ ಕ್ರಮವು ಗ್ರಾಹಕರ ಮೇಲೆ ಹೆಚ್ಚುವರಿ ಆರ್ಥಿಕ ಬಾಧೆಯನ್ನು ಹಾಕುತ್ತದೆ.

ಈಗ, ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ರೂ.4,659 ಕೋಟಿ ಹಿಂಬಾಕಿ ಮೊತ್ತವೂ ಸೇರಿದಂತೆ ರೂ.8,519 ಕೋಟಿಯನ್ನು ಗ್ರಾಹಕರಿಂದ ವಸೂಲಿ ಮಾಡಲು ಉದ್ದೇಶಿಸಲಾಗಿದೆ. ಏಪ್ರಿಲ್ 1ರ ನಂತರ ನೀಡಲಾಗುವ ವಿದ್ಯುತ್ ಬಿಲ್‌ಗಳಲ್ಲಿ ಪ್ರತಿ ಯೂನಿಟ್ ವಿದ್ಯುತ್ ಮೇಲೆ ರೂ.36 ಪೈಸೆಯನ್ನು ಹೆಚ್ಚುವರಿಯಾಗಿ ವಸೂಲಿ ಮಾಡಲಾಗುತ್ತದೆ.

ಕೆಪಿಟಿಸಿಎಲ್ ಮತ್ತು ಹೆಸ್ಕಾಂಗಳು ಸ್ವತಂತ್ರ ಕಂಪನಿಗಳೆಂದು ಬಿಂಬಿಸಿ, ಅವುಗಳ ನೌಕರರ ಪಿಂಚಣಿ ಮತ್ತು ಗ್ರಾಚ್ಯುಟಿಗೆ ಸರ್ಕಾರ ಭರಿಸಬೇಕಿದ್ದ ಮೊತ್ತವನ್ನು ಗ್ರಾಹಕರಿಗೆ ವರ್ಗಾಯಿಸುವ ರಾಜ್ಯ ಸರ್ಕಾರದ ನಡೆ ಜನವಿರೋಧಿಯಾಗಿದೆ.

ವಿದ್ಯುತ್ ನೌಕರರ ಪಿಂಚಣಿ, ಗ್ರಾಚ್ಯುಟಿಯ ಪಾಲು ತುಂಬುವುದಕ್ಕೆ ಪರ್ಯಾಯ ವ್ಯವಸ್ಥೆಯತ್ತ ಗಮನಹರಿಸಬೇಕು. ಕೆಪಿಟಿಸಿಎಲ್ ಮತ್ತು ಹೆಸ್ಕಾಂಗಳ ನೌಕರರನ್ನು ಸರ್ಕಾರಿ ನೌಕರರೆಂದೇ ಪರಿಗಣಿಸಲಾಗಿದೆ. ಹೀಗಿರುವಾಗ ಆ ನೌಕರರ ಪಿಂಚಣಿ, ಗ್ರಾಚ್ಯುಟಿಯಂತಹ ಸೌಲಭ್ಯಗಳಿಗೆ ಅಗತ್ಯ ಆರ್ಥಿಕ ಸಂಪನ್ಮೂಲ ಒದಗಿಸುವುದು ಸರ್ಕಾರದ ಹೊಣೆಗಾರಿಕೆ. ಉದ್ಯೋಗದಾತ ಮತ್ತು ಉದ್ಯೋಗಿಗಳಿಗೆ ಸಂಬಂಧಪಟ್ಟ ವಿಷಯದಲ್ಲಿ ಗ್ರಾಹಕರನ್ನು ಮಧ್ಯೆ ತರುವುದು ಸರಿಯಲ್ಲ. ಈ ನಿರ್ಧಾರವನ್ನು ಕೈಗಾರಿಕೋದ್ಯಮಿಗಳ ಹಿತದೃಷ್ಟಿಯಿಂದ ಸರ್ಕಾರ ತಕ್ಷಣ ಹಿಂಪಡೆಯಬೇಕೆಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!