ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಡಾ ಹಗರಣ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ಕೋರ್ಟ್ನಲ್ಲೂ ಸಹ ಸಿಎಂ ಸಿದ್ದರಾಮಯ್ಯಗೆ ಹಿನ್ನೆಡೆಯಾಗಿದೆ.
ಇನ್ನೂ ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇದು ರಾಜಕೀಯ ಪಿತೂರಿ. ಹೈಕೋರ್ಟ್‌ನಿಂದ ತೀರ್ಪು ಬಂದಿದೆ. ನಮಗೆ ಮುಂದೆ ಅನೇಕ ಆಯ್ಕೆಗಳು ಇವೆ. ನಾವು ಕಾನೂನು ಹೋರಾಟ ಮಾಡುತ್ತೇವೆ. ನಾವೆಲ್ಲ ಸಿಎಂ ಜೊತೆ ಇದ್ದೇವೆ ಎಂದು ತಿಳಿಸಿದರು.
ಸಿಎಂ ರಾಜೀನಾಮೆಗೆ ವಿಪಕ್ಷಗಳ ಒತ್ತಡ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿಪಕ್ಷಗಳಿಗೆ ಹೇಳಿ ಸಮ್ಮಿಶ್ರ ಸರ್ಕಾರದಲ್ಲಿ ಎಷ್ಟು ಜನರ ಮೇಲೆ ಕೇಸ್ ಇದೆ. ಎಫ್‌ಐಆರ್ ದಾಖಲು ಆಗಿದೆ. ಎಷ್ಟು ಜನ ಬೇಲ್ ಮೇಲೆ ಇದ್ದಾರೆ. ಮೊದಲು ಅವರ ಬಳಿ ರಾಜೀನಾಮೆ ಪಡೆಯಲಿ. ಆಮೇಲೆ ಸಿಎಂ ಅವರ ರಾಜೀನಾಮೆ ಕೇಳಲಿ ಎಂದು ಆಕ್ರೋಶ ಹೊರ ಹಾಕಿದರು.