ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ: ರಾಜ್ಯಪಾಲರ ಅಂಕಿತ

0
Spread the love

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಅಂಕಿತ ಹಾಕಲು ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಸರ್ಕಾರ ಕಳುಹಿಸಿರುವ ಸುಗ್ರಿವಾಜ್ಞೆಗೆ ಈ ಹಿಂದೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಮಾಡದೇ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಇದೀಗ ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.

Advertisement

ಹೌದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಲವು ಸಲಹೆಗಳನ್ನು ನೀಡಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ಕುರಿತಂತೆ ಹಲವು ಸೂಚನೆಗಳನ್ನು ನೀಡಿರುವ ರಾಜ್ಯಪಾಲರು, ಈ ವಿಷಯದ ಕುರಿತು ಅಧಿವೇಶನದಲ್ಲಿ ಚರ್ಚಿಸುವಂತೆ ಸೂಚನೆ ನೀಡಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ ಆಗಿದೆ.  ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಮೈಕ್ರೋ ಫೈನಾನ್ಸ್ ಗೆ ಸಂಬಂಧಿಸಿದ ಸುಗ್ರೀವಾಜ್ಣೆಯನ್ನು ಸರ್ಕಾರ ರಾಜಭವನಕ್ಕೆ ಕಳುಹಿಸಿತ್ತು.‌ ಇದೀಗ ಸುಗ್ರೀವಾಜ್ಣೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ.

 


Spread the love

LEAVE A REPLY

Please enter your comment!
Please enter your name here