ಮಂಡ್ಯ:- ದೇಶದ ಹಿರಿಯ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರು ಇಂದು ನಿಧನರಾಗಿದ್ದು, ಸಾಕಷ್ಟು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
Advertisement
ಇನ್ನೂ SM ಕೃಷ್ಣರ ನಿಧನ ಹಿನ್ನೆಲೆ, ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ. ನಾಳೆ ಹುಟ್ಟೂರಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈ ಹಿನ್ನೆಲೆ ಪ್ರಗತಿಪರ ಸಂಘಟನೆಗಳು ಸ್ವಯಂ ಪ್ರೇರಿತ ಬಂದ್‌ಗೆ ಕರೆ ಕೊಟ್ಟಿವೆ. ಬಂದ್‌ಗೆ ವರ್ತಕರು, ಬೀದಿಬದಿ ವ್ಯಾಪಾರಿಗಳು, ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರ ಸಂಘ ಬೆಂಬಲ ಸೂಚಿಸಿವೆ.
ಅಗಲಿದ ನಾಯಕನಿಗೆ ಅಂಗಡಿ ಮುಂಗಟ್ಟು ಮುಚ್ಚಿ ಅಂತಿಮ ನಮನ ಸಲ್ಲಿಸುವಂತೆ ಕರೆ ನೀಡಲಾಗಿದೆ. ಒಕ್ಕಲಿಗರ ಸಂಘ, ದಲಿತಪರ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಇದಕ್ಕೆ ಬೆಂಬಲ ನೀಡಿದೆ.