ಭಿನ್ನಾಭಿಪ್ರಾಯಗಳನ್ನು ಮರೆತು ಸಾಗೋಣ : ಮಾಲಿಪಾಟೀಲ

0
Organizing meeting of Veerashaiva Lingayat Panchamasali Sangh
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಾ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಭಾನುವಾರ ಪಟ್ಟಣದ ಚಂಬಣ್ಣ ಬಾಳಿಕಾಯಿ ಅವರ ಮಿಲ್‌ನಲ್ಲಿ ಲಕ್ಷ್ಮೇಶ್ವರ ತಾಲೂಕು ಸಮಾಜ ಸಂಘಟನಾ ಸಭೆ ಜರುಗಿತು.

Advertisement

ಸಭೆಯನ್ನುದ್ದೇಶಿಸಿ ರಾಜ್ಯಾಧ್ಯಕ್ಷ ಸೋಮನಗೌಡ ಮಾಲಿಪಾಟೀಲ ಮಾತನಾಡಿ, ಪಂಚಮಸಾಲಿ ಸಂಘದ ಸಂಘಟನೆ 45 ವರ್ಷಗಳ ಹಿಂದೆಯೇ ಗದಗ ಜಿಲ್ಲೆಯ ಸಮಾಜದ ಹಿರಿಯರಿಂದಲೇ ಪ್ರಾರಂಭವಾಗಿದೆ. ಸಮಾಜ ಸಂಘಟನೆಯಲ್ಲಿ ಗದಗ ಜಿಲ್ಲೆ ಮುಂಚೂಣಿಯಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಮರೆತು ಒಟ್ಟಾಗಿ ಸಾಗುವ ನಿಟ್ಟಿನಲ್ಲಿ ಸಮಾಜ ಬಾಂಧವರು ಚಿಂತನೆ ನಡೆಸಬೇಕಾಗಿದೆ.

ಸಮಾಜದ ಹಿರಿಯ ನ್ಯಾಯವಾದಿ ಪ್ರಕಾಶ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಅತಿಹೆಚ್ಚು ಜನಸಂಖ್ಯೆಯನ್ನು ಪಂಚಮಸಾಲಿ ಸಮಾಜ ಹೊಂದಿದ್ದು, ಈ ನಿಟ್ಟಿನಲ್ಲಿ ಸಮಾಜಕ್ಕೆ ದೊರೆಯಬೇಕಾದ ಸೌಲಭ್ಯಗಳನ್ನು ಪಡೆಯಲು ಸಂಘಟಿತರಾಗಿ, ಹರಿಹರ ಪೀಠದ ಜ.ವಚನಾನಂದ ಶ್ರೀಗಳ ಮಾರ್ಗದರ್ಶನದಲ್ಲಿ ಸಾಗೋಣ ಎಂದರು.

ಈ ವೇಳೆ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಸೋಮನಗೌಡ ಮಾಲಿಪಾಟೀಲ್ ಹಾಗೂ ಪ್ರಧಾನ ಕಾರ್ಯದರ್ಶಿ ಪರಮೇಶ್ ಪಟ್ಟಣಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಾಧ್ಯಕ್ಷ ಮಂಜುನಾಥ ಮಾಗಡಿ ವಹಿಸಿ ಮಾತನಾಡಿದರು. ಅತಿಥಿಗಳಾಗಿ ಸಮಾಜದ ಮುಖಂಡರಾದ ಕೊಟ್ರೇಶ ಕಿಚಡಿ, ಡಿ.ಬಿ. ಬಳಿಗಾರ, ಚಂಬಣ್ಣ ಬಾಳಿಕಾಯಿ, ಮಾಲಾದೇವಿ ದಂದರಗಿ, ಶಾರದಕ್ಕ ಮಹಾಂತಶೆಟ್ಟರ, ರುದ್ರಗೌಡ ಪಾಟೀಲ, ಎಂ.ಆರ್. ಪಾಟೀಲ, ನೀಲಪ್ಪ ಕರ್ಜೆಕಣ್ಣವರ, ಮಹಾದೇವಪ್ಪ ಅಣ್ಣಿಗೇರಿ, ಸಿದ್ದನಗೌಡ ಬಳ್ಳೊಳ್ಳಿ, ಎನ್.ಐ. ಬೆಲ್ಲದ, ಪ್ರವೀಣ ಬಾಳಿಕಾಯಿ, ಡಾ. ಪಿ.ಡಿ. ತೋಟದ, ಶಿವನಗೌಡ್ರ ಅಡರಕಟ್ಟಿ, ಸುರೇಶ ರಾಚನಾಯ್ಕರ, ಶಿವಣ್ಣ ಬನ್ನಿಮಟ್ಟಿ, ದೇವೇಂದ್ರಪ್ಪ ಮ್ಯಾಗೇರಿ, ಎಸ್.ಕೆ. ಪೊಲೀಸ್‌ಪಾಟೀಲ, ಎಸ್.ಎಫ್. ಆದಿ, ನಾಗರಾಜ ಕಳಸಾಪೂರ, ಚಂದ್ರು ಮಾಗಡಿ ಮುಂತಾದವರಿದ್ದರು.

ರಾಜ್ಯದಲ್ಲಿ 80 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಪಂಚಮಸಾಲಿ ಸಮಾಜದ ಪ್ರತಿನಿಧಿಯಾಗಿ ಸಮಾಜದ ಜನರ ವಿಶ್ವಾಸಕ್ಕೆ ದಕ್ಕೆಯಾಗದಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರ ನಿರೀಕ್ಷೆಯಂತೆ ಸಮಾಜದ ಧ್ವನಿಯಾಗಿ ಕೆಲಸ ಮಾಡುತ್ತೇನೆ. ರಾಜ್ಯದ ಮೂಲೆ ಮೂಲೆಗೂ ಸಂಚರಿಸಿ ರಾಜ್ಯದ ಪ್ರತಿ ಜಿಲ್ಲೆ, ತಾಲೂಕು ಮತ್ತು ಹಳ್ಳಿಗಳನ್ನು ಸಂಪರ್ಕಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಪ್ರತಿ ಜಿಲ್ಲೆ ಹಾಗೂ ತಾಲೂಕಿಗೆ ಭೇಟಿ ನೀಡುತ್ತೇನೆ. ಸಮಾಜದ ಸಂಘಟನೆಯಲ್ಲಿ ಪ್ರತಿಯೊಬ್ಬರು ಪ್ರಾಮಾಣಿಕರಾಗಿ ಪಾಲ್ಗೊಳ್ಳೋಣ ಸೋಮನಗೌಡ ಮಾಲಿಪಾಟೀಲ್ ಕರೆ ನೀಡಿದರು.


Spread the love

LEAVE A REPLY

Please enter your comment!
Please enter your name here