ಕಲಬುರ್ಗಿ:- ನಮ್ಮ ಹೋರಾಟ ಇರುವುದು ವಕ್ಫ್ ವಿರುದ್ಧವೇ ಹೊರತು, ಯಾವುದೇ ಕುಟುಂಬದ ವಿರುದ್ಧವಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
Advertisement
ಈ ಸಂಬಂಧ ಮಾತನಾಡಿದ ಅವರು, ನಾವು ರಾಜ್ಯದ ರೈತರಿಗಾಗಿ ಹೋರಾಟ ಮಾಡುತ್ತಿದ್ದೇವೆಯೇ ಹೊರತು ಯಾವುದೇ ಕುಟುಂಬದ ವಿರುದ್ಧವಾಗಿ ಅಲ್ಲ. ನಾವೇನೂ ಮುಖ್ಯಮಂತ್ರಿಯಾಗಲು ಹೋರಾಟ ನಡೆಸುತ್ತಿಲ್ಲ. ರಾಜ್ಯದ ರೈತರಿಗೆ ಸಂಕಷ್ಟ ಬಂದಿದೆ. ಸಂಕಷ್ಟಕ್ಕೆ ಕಾರಣವಾಗಿರುವ ವಕ್ಫ್ ವಿರುದ್ಧ ಜನಜಾಗೃತಿಗಾಗಿ ಹೋರಾಟ ನಡೆಸಲಾಗುತ್ತಿದೆ ಹೊರತು ಯಾವುದೇ ರಾಜಕೀಯ ಲಾಭಕ್ಕಾಗಿ ಅಲ್ಲ ಎಂದು ಹೇಳಿದರು.
ಉಪಚುನಾವಣೆಯಲ್ಲಿ ಆಗಿರುವ ಸೋಲಿನ ಹೊಣೆಯನ್ನು ಎಲ್ಲಾ ನಾಯಕರು ಹೊರಬೇಕು ಎಂಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗೆದ್ದರೆ ಅವರು ಹೊರಬೇಕು. ಸೋತರೆ ನಾವು ಹೊರಬೇಕು. ಹಿರಿಯರು ಹೇಳಿದ ಮಾತ್ರಕ್ಕೆ ನಾವೆಲ್ಲ ಕೇಳಬೇಕು ಎಂದು ವ್ಯಂಗ್ಯವಾಡಿದರು.