ಬೆಳಗಾವಿ: ನಮ್ಮ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚೆಗೆ ಸಿದ್ಧವಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚೆಗೆ ಸಿದ್ಧವಿದೆ. ಎಲ್ಲರೂ ನಿನ್ನೆಯಿಂದ ಮಾತನಾಡುತ್ತಿದ್ದಾರೆ. ಇವತ್ತು, ನಾಳೆಯೂ ಇದೇ ಚರ್ಚೆ ಮುಂದುವರೆಯುತ್ತದೆ. ವಿಧಾನಸಭೆಯಂತೆಯೇ ಪರಿಷತ್ನಲ್ಲೂ ಈ ಕುರಿತು ಚರ್ಚೆ ನಡೆಯಬೇಕು ಎಂದು ಹೇಳಿದರು.
ಇನ್ನೂ ಉತ್ತರ ಕರ್ನಾಟಕ ಭಾಗದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ ನಡೆದರೆ ಜನರಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಇಲ್ಲವಾದರೆ ಸುವರ್ಣ ಸೌಧ ಇದ್ದೂ ಏನೂ ಪ್ರಯೋಜನವಿಲ್ಲ ಎಂಬ ಮನಸ್ಥಿತಿ ಸೃಷ್ಟಿಯಾಗುತ್ತದೆ. ಸದನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರು ಬಹಳಷ್ಟು ಗಂಭೀರವಾಗಿ ಚರ್ಚೆ ನಡೆಸುತ್ತಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುವೆ. ಇಲ್ಲಿ ಚರ್ಚೆಯಾದ ವಿಷಯಗಳನ್ನು ನಾವು ಅನುಷ್ಠಾನಕ್ಕೆ ತರುವುದು ನಮ್ಮ ಸರ್ಕಾರದ ಗ್ಯಾರಂಟಿಯಾಗಿದೆ ಎಂದು ಭರವಸೆ ನೀಡಿದ್ದಾರೆ.