ಬೆಂಗಳೂರು: ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದಲಿತ ಸಮುದಾಯದ ಮೇಲಿನ ದೌರ್ಜನ್ಯ ಬಗ್ಗೆ ಚರ್ಚೆ ಆಗಬೇಕಿದೆ.
Advertisement
ಯಾರೂ ನಮ್ಮ ಸಭೆಯನ್ನು ಸಹಿಸುವುದಿಲ್ಲ ಎಂದು ಹೇಳಿಲ್ಲ. ನಮ್ಮ ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ. ಸದ್ಯದ ಮಟ್ಟಿಗೆ ಸಭೆ ಮುಂದಕ್ಕೆ ಹಾಕಿದ್ದೇವೆ. ಮತ್ತೆ ದಿನಾಂಕ ನಿಗದಿ ಆದಾಗ ತಿಳಿಸುತ್ತೇವೆ. ಏನಾಗಿದೆ ಎಂದು ಎಲ್ಲವನ್ನೂ ಹೇಳಲು ಆಗುವುದಿಲ್ಲವಲ್ಲ ಎಂದು ಹೇಳಿದರು.
ಊಟಕ್ಕೂ ಮೊದಲು ಚರ್ಚೆ ಮಾಡುತ್ತೇವೆ. ಡಿನ್ನರ್ ಅಂದ್ರೆ ಏನೇನೋ ವ್ಯಾಖ್ಯಾನ ಮಾಡುತ್ತೀರಿ. ಸಭೆ ಇದ್ದಾಗ ಊಟ ಮಾಡುವುದು ಸಹಜ. ಸ್ವಲ್ಪ ದಿನ ಕಾಯೋಣ, ಸಭೆ ಅವರಿಗೆ ಇಷ್ಟ ಇತ್ತೋ ಅಥವಾ ಇಲ್ಲವೋ ಎಂಬುದು ಎಲ್ಲವೂ ಗೊತ್ತಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.