ಬೆಂಗಳೂರು: ಯುಗಾದಿ ಹಿಂದಿನ ದಿನ, ನಮ್ಮ ಮೆಟ್ರೋದಲ್ಲಿ 10.73 ಲಕ್ಷ ಜನರು ಪ್ರಯಾಣಿಸಿ 15 ವರ್ಷಗಳ ಮೆಟ್ರೋ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.
ನಾಲ್ಕು ದಿನದ ನಿರಂತರ ರಜೆಯ ಕಾರಣ ಮೆಟ್ರೋ ಪ್ರಯಾಣಿಕರ ಸಂಖ್ಯೆ ಬೃಹತ್ ಪ್ರಮಾಣಕ್ಕೆ ಏರಿಕೆಯಾಗಿದ್ದು, 10 ಲಕ್ಷಕ್ಕೂ ಹೆಚ್ಚು ಜನರು ಒಂದೇ ದಿನ ಸಂಚರಿಸಿದ್ದಾರೆ. ಈ ಸಂಖ್ಯೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸ್ಮಾರ್ಟ್‌ಕಾರ್ಡ್ ಬಳಕೆ ಮಾಡಿಕೊಂಡಿದ್ದಾರೆ.
ಈ ಸಾಧನೆಯೊಂದಿಗೆ ಬೆಂಗಳೂರು ಮೆಟ್ರೋ ನಗರ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಮೈಲಿಗಲ್ಲು ತಲುಪಿದ್ದು, ನಗರಿಗರಿಗೆ ಬೃಹತ್ ಮೆಟ್ರೋ ಸೇವೆ ನೀಡುವ ಸಾಮರ್ಥ್ಯವನ್ನು ಪುನರುಚ್ಚರಿಸಿದೆ.



