ಹಾವೇರಿ: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಅಸಮಾಧಾನ ಭುಗಿಲೆದ್ದಿದ್ದು ಅದನ್ನು ಶಮನ ಮಾಡಲು ಸಚಿವ ಜಮೀರ್ ಅಹ್ಮದ್ ಅವರು ತೆರಳಿದ್ದಾಗ ಅವರಿದ್ದ ಕಾರಿಗೆ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಹೌದು ಶಿಗ್ಗಾಂವಿ ಕಾಂಗ್ರೆಸ್‍ನಲ್ಲಿ ಬಂಡಾಯದ ಬಿಸಿ ಹೆಚ್ಚಾಗಿದ್ದು, ಹೂಲಗೂರು ಗ್ರಾಮದಲ್ಲಿ ಖಾದ್ರಿ ಅಭಿಮಾನಿಗಳ ಮನವೊಲಿಸಲು ಸಚಿವ ಜಮೀರ್ ಅಹ್ಮದ್ ತೆರಳಿದ್ದರು. ಆದರೆ ಮನವೊಲಿಕೆ ಯತ್ನ ವಿಫಲವಾಗಿದೆ.
ಸಚಿವ ಜಮೀರ್ ಅಹ್ಮದ್ ಅವರ ಕಾರಿನ ಗಾಜನ್ನು ಟಿಕೆಟ್ ವಂಚಿತ ಅಜ್ಜಂ ಫೀರ್ ಖಾದ್ರಿ ಅಭಿಮಾನಿಗಳು ಒಡೆದು ಹಾಕಿದ್ದಾರೆ. ಇದರ ಬೆನ್ನಲ್ಲೇ ಅಜ್ಜಂ ಫೀರ್ ಖಾದ್ರಿಯವರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿ ಸೋಲಿಸೋದಷ್ಟೆ ನನ್ನ ಗುರಿ ಎಂದು ಹೇಳಿದ್ದಾರೆ.



